Tuesday, November 24, 2026

ಪ್ರಾಯೋಗಿಕ ಆವೃತ್ತಿ

ಎಸ್.ಎಂ.ಕೃಷ್ಣ ನಿಧನ | ಡಿ.11ರಂದು ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ

ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾಗಿದ್ದ ಎಸ್.ಎಂ.ಕೃಷ್ಣ ನಿಧನದ ಹಿನ್ನೆಲೆಯಲ್ಲಿ ಡಿ.11ರ ಬುಧವಾರದಂದು ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.

ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ (ಎಲ್ಲಾ ಅನುದಾನಿತ ವಿದ್ಯಾ ಸಂಸ್ಥೆಗಳು ಸೇರಿದಂತೆ) ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ. ಅಲ್ಲದೇ ಡಿ.10ರಿಂದ ಡಿ.12ರವರೆಗೆ (ಉಭಯ ದಿನಗಳು ಸೇರಿ) ಮೂರು ದಿನಗಳು ರಾಜ್ಯಾದ್ಯಂತ ಶೋಕಾಚರಣೆ ಮಾಡಲಾಗುವುದು ಹಾಗೂ ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ನಿಯತವಾಗಿ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಲಿದೆ.

ಎಸ್.ಎಂ.ಕೃಷ್ಣ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಜರುಗಲಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ