Thursday, September 19, 2024

ಪ್ರಾಯೋಗಿಕ ಆವೃತ್ತಿ

2.55 ಲಕ್ಷ ರಾಜ್ಯ ಸರ್ಕಾರಿ ಹುದ್ದೆಗಳು ಖಾಲಿ….ಈ ಬಗ್ಗೆ ಸದನದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು….?

ರಾಜ್ಯ ಸರ್ಕಾರದಲ್ಲಿ ಒಟ್ಟು ಇರುವ ಹುದ್ದೆಗಳ ಸಂಖ್ಯೆ 7,72,025 ಹುದ್ದೆಗಳು, ಈ ಪೈಕಿ 5,16,105 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಆದರೆ ಇನ್ನು 2,55,920 ಹುದ್ದೆಗಳು ಖಾಲಿ ಉಳಿದಿದ್ದು, ಅವುಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

 

ಸದನದಲ್ಲಿ ವಿಧಾನ ಪರಿಷತ್ ಸದಸ್ಯ ಹೆಚ್.ಎಸ್.ಗೋಪಿನಾಥ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಒಟ್ಟಾರೆ ರಾಜ್ಯ ಸರ್ಕಾರದಲ್ಲಿ ಶೇ.33 ಹುದ್ದೆಗಳು ಮಾತ್ರ ಖಾಲಿ ಉಳಿದಿವೆ. ಹೊರ ಗುತ್ತಿಗೆ ಆಧಾರದ ಮೇಲೆ 75,474 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗಿದೆ. ಈಗಾಗಲೇ ನಮ್ಮ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಆಶ್ವಾಸನೆ ನೀಡಿರುವಂತೆ ಹಂತ ಹಂತವಾಗಿ ಎಲ್ಲಾ ಖಾಲಿ ಉಳಿದಿರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!