Saturday, June 15, 2024

ಪ್ರಾಯೋಗಿಕ ಆವೃತ್ತಿ

ಪದವೀಧರರ ಪರ ನಿಂತಿದ್ದು ಕುಮಾರಸ್ವಾಮಿ ಸರ್ಕಾರ

ಎಚ್.ಡಿ.ಕುಮಾರಸ್ವಾಮಿಯವರು ತಮ್ಮ ಅಧಿಕಾರದ ಅವಧಿಯಲ್ಲಿ ಪದವೀಧರರಿಗೆ ಅತಿ ಹೆಚ್ಚು ಉದ್ಯೋಗಾವಕಾಶಗಳನ್ನು ಮಾಡಿಕೊಡುವ ಮೂಲಕ ಅವರ ನಿಂತಿದ್ದರು ಎಂದು ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ತಿಳಿಸಿದರು.

ಮಂಡ್ಯದ ಮಂಜುನಾಥ ಕನ್ವೆನ್ಷನ್ ಹಾಲ್ ನಲ್ಲಿ ನಡೆದ ದಕ್ಷಿಣ ಪದವೀಧರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಚ್.ಕೆ.ರಾಮು ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಕುಮಾರಸ್ವಾಮಿ ಅವರು 2006ರಲ್ಲಿ ಬಿಜೆಪಿ ಜೊತೆ ಸೇರಿ ಸಮ್ಮಿಶ್ರ ಸರ್ಕಾರ ನಡೆಸಿದ ಸಂದರ್ಭದಲ್ಲಿ ಅವರ ಏಕೈಕ ಗುರಿ, ಹೆಚ್ಚಿನ ಸಂಖ್ಯೆಯಲ್ಲಿ ಇರುವ ನಿರುದ್ಯೋಗಿ ಪದವೀಧರರಿಗೆ ಉದ್ಯೋಗವಕಾಶ ನೀಡುವುದು. ಅದರಂತೆ ಕುಮಾರಸ್ವಾಮಿ ಅವರ ಕಾಲದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಕ್ರಾಂತಿಯೇ ನಡೆಯಿತು ಎಂದು ತಿಳಿಸಿದರು.

ಸ್ವಾತಂತ್ರ್ಯ ಬಂದ ನಂತರ ಶಾಲೆಗಳ ಸಂಖ್ಯೆ ದ್ವಿಗುಣವಾಗಿದ್ದು ಕುಮಾರಸ್ವಾಮಿ ಕಾಲದಲ್ಲಿ. ಪಿಯುಸಿ ಕಾಲೇಜು, ಪದವಿ ಕಾಲೇಜು, ಐಟಿಐ, ಇಂಜಿನಿಯರಿಂಗ್, ಮೆಡಿಕಲ್ ಕಾಲೇಜುಗಳು ಸಂಖ್ಯೆ ದ್ವಿಗುಣವಾಯಿತು. ಇದರರ್ಥ ದೇವೇಗೌಡ ಮತ್ತು ಕುಮಾರಸ್ವಾಮಿ ಪದವೀಧರರ ಹಿಂದೆ ಇದ್ದಾರೆ ಎಂದರು.

ವಿಧಾನಪರಿಷತ್ ಸದಸ್ಯ ಕೆ‌.ಟಿ.ಶ್ರೀಕಂಠೇಗೌಡ ನಾಲ್ಕು ಬಾರಿ ಸ್ಪರ್ಧೆ ಮಾಡಿದಾಗ ನಾನೇ ಹೋಗಿ ಬಿ.ಫಾರಂ ತಂದಿದ್ದೆ. ಅವರನ್ನು ಎರಡು ಬಾರಿ ಆಯ್ಕೆ ಮಾಡಿದ್ದೀರಿ. ಅದರಂತೆ ಈ ಬಾರಿ ಪದವೀಧರ ಮತದಾರರು ನಮ್ಮ ಪಕ್ಷದ ಅಭ್ಯರ್ಥಿ ಹೆಚ್.ಕೆ. ರಾಮು ಅವರನ್ನು ಭಾರೀ ಅಂತರದಿಂದ ಗೆಲ್ಲಿಸಿ ಕೊಡಬೇಕು ಎಂದು ಮನವಿ ಮಾಡಿದರು.

ದೇವೇಗೌಡರು 90ರ ವಯಸ್ಸಿನಲ್ಲೂ ರಾಜ್ಯಾದ್ಯಂತ ಸಂಚರಿಸುತ್ತಾ ಜೆಡಿಎಸ್ ಪಕ್ಷವನ್ನು ತರಲು ಹೋರಾಟ ನಡೆಸುತ್ತಿದ್ದಾರೆ. ನಮಯ ರಾಷ್ಟ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ದೇವೇಗೌಡರು ರೈತರು, ಪದವೀಧರರು ಹಾಗೂ ನೌಕರರ ಪರವಾಗಿ ಕಳಕಳಿ ಇಟ್ಟು ಕೊಂಡಿದ್ದಾರೆ.

ಕುಮಾರಸ್ವಾಮಿಯವರು 14 ತಿಂಗಳು ಮುಖ್ಯಮಂತ್ರಿಯಾಗಿ ಕೊಟ್ಟಂತಹ ಕಾರ್ಯಕ್ರಮಗಳನ್ನು ಯಾರೂ ಮರೆತಿಲ್ಲ ಎಂದು ನಾನು ಭಾವಿಸುತ್ತೇನೆ. ಅವರು ಉತ್ತಮ ಅಭ್ಯರ್ಥಿಯಾಗಿದ್ದು ಈಗಾಗಲೇ ಎಲ್ಲ ಜಿಲ್ಲೆಗಳಲ್ಲಿ ಸಂಚರಿಸಿ ಮತದಾರರನ್ನು ಭೇಟಿಯಾಗಿ ಮತ ನೀಡುವಂತೆ ಕೇಳಿಕೊಂಡಿದ್ದಾರೆ‌.

ಜೆಡಿಎಸ್ ಅಂದರೆ ಮಂಡ್ಯ ಮಂಡ್ಯ ಅಂದರೆ ಜೆಡಿಎಸ್ ಎಂಬುದು ನಿರೂಪಿಸಲು ಪದವೀಧರ ಮತದಾರರು ರಾಮಣ್ಣನವರಿಗೆ ಹೆಚ್ಚಿನ ಮತ ನೀಡಿ ಗೆಲ್ಲಿಸಬೇಕೆಂದು ಮನವಿ ಮಾಡಿದರು.

ವಿಧಾನಪರಿಷತ್ ಸದಸ್ಯ ಶ್ರೀಕಂಠೇಗೌಡ, ಶಾಸಕರಾದ ರವೀಂದ್ರ ಶ್ರೀಕಂಠಯ್ಯ,ಅನ್ನಧಾನಿ, ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ್, ಟಿಇಟಿ ಅಧ್ಯಕ್ಷ ವಿಜಯಾನಂದ ಮಾತನಾಡಿದರು. ಡಿಸಿಸಿ ಬ್ಯಾಂಕ್ ನಿರ್ದೇಶಕ ಕಾಳೇಗೌಡ, ಮನ್ಮುಲ್ ಅಧ್ಯಕ್ಷ ರಾಮಚಂದ್ರ, ಮುದ್ದನಘಟ್ಟ ಮಹಾ ಲಿಂಗೇಗೌಡ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!