Sunday, November 22, 2026

ಪ್ರಾಯೋಗಿಕ ಆವೃತ್ತಿ

ಕಾವೇರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪದವಿ ಪ್ರದಾನ

ಕಾವೇರಿ ಎಜುಕೇಷನ್ ಅಂಡ್ ರೀಸರ್ಚ್ ಟ್ರಸ್ಟ್ ಹಾಗೂ ಕಾವೇರಿ ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ಜುಲೈ 30ರಂದು ಬೆಳಿಗ್ಗೆ 10 ಗಂಟೆಗೆ ಕಾಲೇಜಿನ ಆವರಣದಲ್ಲಿ ಪದವಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ಕಾರ್ಯದರ್ಶಿ ಪ್ರೊ. ಟಿ.ನಾಗೇಂದ್ರ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕೋವಿಡ್ ಕಾರಣದಿಂದ ಕಳೆದ ಮೂರು ವರ್ಷಗಳಿಂದ ಪದವಿ ಪ್ರದಾನ ನಡೆದಿಲ್ಲ. ಆದ ಕಾರಣ ಈ ಬಾರಿ ಕಳೆದ ಮೂರು ವರ್ಷಗಳ ಸುಮಾರು ೪೦೦ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತಿದೆ ಎಂದರು.

ಈ ಸಮಾರಂಭವಕ್ಕೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಗಳ ಮಾಜಿ ಉಪಕುಲಪತಿ ಡಾ.ರಂಗಪ್ಪರವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ವಿದ್ಯಾರ್ಥಿಗಳಿಗೆ ಪ್ರೇರಕ ಭಾಷಣ ಮಾಡಲಿದ್ದಾರೆ ಎಂದರು.

ನಮ್ಮ ಕಾಲೇಜಿನಿಂದ ಪದವಿ ಪಡೆದು ಹೊರ ಹೋಗುತ್ತಿರುವ ಬಹುಪಾಲು ವಿದ್ಯಾರ್ಥಿಗಳು ವಿವಿಧ ಕಂಪನಿಗಳಿಗೆ ಆಯ್ಕೆಯಾಗಿ ಬಹಳ ಸಂತೋಷದಲ್ಲಿದ್ದಾರೆ. ಆಡಳಿತ ಮಂಡಳಿಯು ವಿಶ್ವವಿದ್ಯಾನಿಲಯದ ಪಠ್ಯದ ಜೊತೆಗೆ ವಿದ್ಯಾರ್ಥಿಗಳಿಗೆ ಕಾರ್ಪೊರೇಟ್ ವಲಯ ನಿರೀಕ್ಷಿಸುವ ಕಮ್ಯುನಿಕೇಷನ್ ಸ್ಕಿಲ್ ಮತ್ತು ಟೆಕ್ನಿಕಲ್ ಸ್ಕಿಲ್ ಗಳ ಬಗ್ಗೆ ತರಬೇತಿಯನ್ನು ನೀಡಿ ಅವರನ್ನು ಅರ್ಹ ಪದವೀಧರರನ್ನಾಗಿ ಮಾಡಿರುವ ಫಲವಾಗಿ ಅವರಿಗೆ ಉತ್ತಮ ಕೆಲಸ ಸಿಕ್ಕಿರುವುದು ನಮಗೆ ತೃಪ್ತಿ ತಂದಿದೆ ಎಂದರು.

ಆಡಳಿತ ಮಂಡಳಿಯು ಕ್ಯಾಂಪಸ್ ಉದ್ಯೋಗ ಮೇಳಕ್ಕೆ ಬಹಳ ಪ್ರಾಮುಖ್ಯತೆಯನ್ನು ಕೊಟ್ಟು ಎಲ್ಲ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಸಲು ಬಹಳ ಶ್ರಮಿಸುತ್ತಿದೆ. ನಮ್ಮ ಕಾವೇರಿ ತಾಂತ್ರಿಕ ಮಹಾವಿದ್ಯಾಲಯವು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರವನ್ನು ಹೊಂದಿರುತ್ತವೆ. ನಮ್ಮ ಸಂಶೋಧನಾ ಕೇಂದ್ರವು ಮೂವರು ಸಂಶೋಧನಾ ವಿದ್ಯಾರ್ಥಿಗಳಿಗೆ ಮೆಕ್ಯಾನಿಕಲ್ ಇಂಜಿನಿಯರಿಂಗ್, ಪಿ.ಎಚ್.ಡಿ ಪದವಿಯನ್ನು ನೀಡಿದೆ ಎಂದರು.

ಪ್ರಸಕ್ತ ಸಾಲಿನಲ್ಲಿ ಬಿಸಿಎ ಮತ್ತು ಬಿಕಾಂ ಕೋರ್ಸ್ ಗಳನ್ನು ಪ್ರಾರಂಭಿಸಿದ್ದೇವೆ. ಜೊತೆಗೆ ಪ್ಯಾರಾ ಮೆಡಿಕಲ್ ಕೋರ್ಸ್ ಪ್ರಾರಂಭಿಸುವ ಉದ್ದೇಶ ಹೊಂದಿದ್ದೇವೆ. ಭವಿಷ್ಯದಲ್ಲಿ ಮಂಡ್ಯ ಜಿಲ್ಲೆಯ ಜನತೆಯ ಶೈಕ್ಷಣಿಕ ಅಭಿವೃದ್ಧಿಗಾಗಿ ಕಾವೇರಿ ಸಮೂಹ ಶಿಕ್ಷಣ ಸಂಸ್ಥೆ ಹಲವು ಅನುಕೂಲಗಳನ್ನು ಒದಗಿಸುವ ಉದ್ದೇಶವನ್ನು ನಮ್ಮ ಹೊಂದಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಅಧ್ಯಕ್ಷ ಡಾ.ಹೆಚ್.ಪಿ.ರಾಜು,ಪ್ರಾಂಶುಪಾಲರಾದ ಶ್ರೀಕಂಠಪ್ಪ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ