ಜೀವನದಲ್ಲಿ ಶಿಸ್ತಿನ ಮಹತ್ವವನ್ನು ವಿವರಿಸಿದರು. ಶಿಸ್ತು ಮತ್ತು ಕಠಿಣ ಪರಿಶ್ರಮವೇ ಯಶಸ್ಸಿಗೆ ದಾರಿಯಾಗಿದೆ. ಪದವೀಧರರು ತಮ್ಮ ವೃತ್ತಿಜೀವನದಲ್ಲಿಯೂ ಈ ಮೌಲ್ಯಗಳನ್ನು ಪಾಲಿಸಬೇಕೆಂದು ಪಿಇಟಿ ಅಧ್ಯಕ್ಷ ಕೆ.ಎಸ್. ವಿಜಯ್ ಆನಂದ್ ತಿಳಿಸಿದರು.
ಮಂಡ್ಯ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶನಿವಾರ ನಡೆದ 16 ನೇ ಪದವಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ (AICTE) ಅಧ್ಯಕ್ಷ ಪ್ರೊ. ಟಿ.ಜಿ. ಸೀತಾರಾಮ್ ಮಾತನಾಡಿ, ಪಿಇಎಸ್ ಇಂಜಿನಿಯರಿಂಗ್ ಕಾಲೇಜನ್ನು ಸ್ಥಾಪಿಸಿ ಅಭಿವೃದ್ಧಿಪಡಿಸಿದ ಕೆ.ವಿ.ಶಂಕರಗೌಡರ ದೃಷ್ಟಿ ಮತ್ತು ಕೊಡುಗೆಗಳನ್ನು ಶ್ಲಾಘಿಸಿದರು.
ಶಿಕ್ಷಣ ಸಚಿವಾಲಯದ ಉಲ್ಲಾಸ್ ಮಾತನಾಡಿ ಪದವೀಧರರು ತಂತ್ರಜ್ಞಾನವನ್ನು ಪ್ರಯೋಜನಕಾರಿಯಾಗಿ ಬಳಸಿಕೊಳ್ಳುವಂತೆ ಸಲಹೆ ನೀಡಿದರು. ವಿದ್ಯಾರ್ಥಿಗಳು ಯೋಗಾಭ್ಯಾಸವನ್ನು ಅಳವಡಿಸಿಕೊಳ್ಳಬೇಕು ಎಂದರು.
ಪ್ರೊ. ಸೀತಾರಾಮ್ ಮಾತನಾಡಿ, ಶಿಕ್ಷಣ ಪಡೆದ ಯುವಕರು ಭಾರತದ ಅಭಿವೃದ್ಧಿಗೆ ಪ್ರಮುಖವಾಗಿ ಕೊಡುಗೆ ನೀಡಬೇಕೆಂದು ಹೇಳಿದರು. ಪದವೀಧರರು ಉದ್ಯಮಶೀಲತೆಯನ್ನು ಬೆಳೆಸಿ, ಸ್ಟಾರ್ಟ್‌ಅಪ್‌ಗಳನ್ನು ಆರಂಭಿಸಿ, ಉದ್ಯೋಗಾವಕಾಶಗಳನ್ನು ಸೃಷ್ಟಿಸುವವರಾಗಬೇಕೆಂದು ಸಲಹೆ ನೀಡಿದರು.
ಜನತಾ ಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಎಸ್.ಎಲ್. ಶಿವಪ್ರಸಾದ್ ಪದವೀಧರರಿಗೆ ಪದವಿ ಪ್ರಮಾಣಪತ್ರಗಳನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಪ್ರಾಂಶುಪಾಲ ಡಾ. ಮುರಳಿಕೃಷ್ಣ, ಉಪ ಪ್ರಾಂಶುಪಾಲ ಡಾ. ವಿನಯ್ ಎಸ್ , ಅಕಾಡೆಮಿಕ್ ಡೀನ್, ಡಾ.ರುದ್ರೇಶ್ ಅಡ್ಡಮಣಿ ಮತ್ತು ಪರೀಕ್ಷಾ ನಿಯಂತ್ರಕ ಡಾ.ಡಿ.ಆರ್.ಉಮೇಶ್ ಉಪಸ್ಥಿತರಿದ್ದರು.




