Thursday, September 19, 2024

ಪ್ರಾಯೋಗಿಕ ಆವೃತ್ತಿ

ಶಿಕ್ಷಕರು ವಿದ್ಯಾರ್ಥಿಗಳನ್ನು ಸನ್ಮಾರ್ಗದತ್ತ ನಡೆಸಬೇಕು: ರಾಜೇಶ್

ವರದಿ: ಪ್ರಭು ವಿ ಎಸ್

ಶಿಕ್ಷಕರಿಗೆ ಸಾವಿರಾರು ವಿದ್ಯಾರ್ಥಿಗಳನ್ನು ಬದಲಾಯಿಸುವ ಶಕ್ತಿ ಇದ್ದು ಜೊತೆಗೆ ಸನ್ಮಾರ್ಗದತ್ತ ಹೆಜ್ಜೆ ಇಡಲು ಪ್ರತಿಯೊಬ್ಬ ಶಿಕ್ಷಕರು ನಿರಂತರವಾಗಿ ಶ್ರಮಿಸಬೇಕೆಂದು ಉನ್ನತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಆರ್ ರಾಜೇಶ್ ತಿಳಿಸಿದರು.

ಮದ್ದೂರು ತಾಲೂಕಿನ ಕೊಪ್ಪ ಗ್ರಾಮದಲ್ಲಿ ಗ್ರೀನ್ ವುಡ್ ವಿದ್ಯಾಸಂಸ್ಥೆ ಆವರಣದಲ್ಲಿ ಆಯೋಜಿಸಿದ ಹಸಿರು ಉತ್ಸವ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಾಥಮಿಕ ಹಂತದಲ್ಲೇ ಮಕ್ಕಳನ್ನು ತಿದ್ದುವ ಮೂಲಕ ಸಮಾಜದ ಅಭ್ಯಯೊದಕ್ಕೆ ನಿರಂತರವಾಗಿ ಶ್ರಮಿಸಲಿದ್ದು ಶಿಕ್ಷಕರು ತಮ್ಮ ಪಾಠ ಪ್ರವಚನದ ಜೊತೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೂ ನಿರಂತರವಾಗಿ ಶ್ರಮಿಸಬೇಕೆಂದು ಹೇಳಿದರು.

ಗ್ರೀನ್ ಹುಡ್ ಸಂಸ್ಥೆಯ ಅಧ್ಯಕ್ಷ ಅಕ್ಷರಂ ವೆಂಕಟೇಶ್ ಮಾತನಾಡಿ, ಹಲವು ವರ್ಷಗಳಿಂದಲೂ ನಿರಂತರವಾಗಿ ಗ್ರಾಮೀಣ ಭಾಗದ ಮಕ್ಕಳ ಅಭಿವೃದ್ಧಿಗೆ ಸಂಸ್ಥೆಯು ನಿರಂತರವಾಗಿ ಶ್ರಮಿಸುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸೌಲಭ್ಯವನ್ನು ಕಲ್ಪಿಸಿ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡಲಾಗುವುದೆಂದರು. ಶಿಕ್ಷಕರು ಮಕ್ಕಳನ್ನು ಕೇವಲ ಅಂಕ ಗಳಿಕೆ ಕಷ್ಟ ಸೀಮಿತಗೊಳಿಸದೆ ಕ್ರೀಡೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ಮಕ್ಕಳನ್ನು ಪ್ರೇರೇಪಿಸುವ ಮೂಲಕ ಅವರಲ್ಲಿರುವ ಹೆಚ್ಚಿನ ಸಾಮರ್ಥ್ಯವನ್ನು ಹೊರತರಲು ನಿರಂತರವಾಗಿ ಶ್ರಮಿಸಬೇಕೆಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸಿಎಚ್ ಕಾಳಿರಯ್ಯ ಮಾತನಾಡಿ, ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಉತ್ತಮಗೊಳಿಸಬೇಕೆಂಬ ಸದುದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು ಪೋಷಕರು ಹಾಗೂ ಶಿಕ್ಷಕರು ಇದರ ಸದುಪಯೋಗಕ್ಕೆ ಮುಂದಾಗಬೇಕೆಂದರು.

ಗೋವು ವಿತರಣೆ

ಪ್ರತಿ ವರ್ಷದಂತೆ ಈ ವರ್ಷವೂ ಗ್ರೀನ್‌ವುಡ್ ಶಾಲೆ ವತಿಯಿಂದ ಬಡ ರೈತರಿಗೆ ಹೈನುಗಾರಿಕೆಗೆ ಅನುಕೂಲವಾಗಲಿ ಆರ್ಥಿಕವಾಗಿ ಮುಂದೆ ಬರಲಿ ಎಂಬ ಉದ್ದೇಶದಿಂದ ಒಂದು ಲಕ್ಷ ರೂ ಬೆಲೆಬಾಳುವ ಸೀಮೆ ಹಸುವನ್ನು ಸಂಸ್ಥೆ ಅಧ್ಯಕ್ಷ ಅಕ್ಷರಂ ವೆಂಕಟೇಶ್ ವಿತರಣೆ ಮಾಡಿದರು.

ವೇದಿಕೆಯಲ್ಲಿ ರೋಟರಿ ಸಂಸ್ಥೆಯ ನಾಗೇಂದ್ರ ಪ್ರಸಾದ, ಪಿ ಬೆಟ್ಟಸ್ವಾಮಿ, ವಿದ್ಯಾಶ್ರೀ,ಲಕ್ಷ್ಮಿ, ಹರ್ಷಿತ ಅಕ್ಷರಂ, ಶಾಲಾ ಶಿಕ್ಷಕರು ನೌಕರರು ಪೋಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!