Saturday, May 18, 2024

ಪ್ರಾಯೋಗಿಕ ಆವೃತ್ತಿ

ವಿದ್ಯುತ್‌ ಬಿಲ್ ಬಾಕಿ ಇದ್ದರೂ ‘ಗೃಹಜ್ಯೋತಿ’ ಲಾಭ : ಇಂಧನ ಇಲಾಖೆ ಹೇಳಿದ್ದೇನು ?

ಗ್ರಾಹಕರು ವಿದ್ಯುತ್‌ ಬಿಲ್ ಹಿಂಬಾಕಿ ಉಳಿಸಿಕೊಂಡಿದ್ದರೂ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್‌ ಪಡೆಯಲು ಅರ್ಹರಾಗಿದ್ದಾರೆ. ಆದರೆ, ಹಿಂಬಾಕಿ ಮೊತ್ತವನ್ನು ಸೆಪ್ಟೆಂಬರ್‌ 30ರ ಒಳಗೆ ಪಾವತಿಸಬೇಕು ಎಂದು ಇಂಧನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಗೃಹಜ್ಯೋತಿ ಯೋಜನೆಗೆ ಗ್ರಾಹಕರು ಜುಲೈ 25ರ ಒಳಗೆ ನೋಂದಾಯಿಸಿಕೊಂಡರೆ, ಆಗಸ್ಟ್ ತಿಂಗಳ ಬಿಲ್‌ನಲ್ಲಿ ಪ್ರಯೋಜನ ಸಿಗಲಿದೆ. ಅದೇ ರೀತಿ ಜುಲೈ 25ರಿಂದ ಆಗಸ್ಟ್ 25ರ ಒಳಗೆ ನೋಂದಾಯಿಸಿಕೊಂಡರೆ ಸೆಪ್ಟೆಂಬರ್ ತಿಂಗಳ ಬಿಲ್‌ನಲ್ಲಿ ಪ್ರಯೋಜನ ದೊರೆಯಲಿದೆ. ಪ್ರತಿ ತಿಂಗಳು 25ನೇ ತಾರೀಕಿನಿಂದ ನಂತರದ ತಿಂಗಳ 25ನೇ ತಾರೀಕಿನವರೆಗೆ ಬಿಲ್ ಮಾಡಲಾಗುತ್ತದೆ.

ಗೃಹಜ್ಯೋತಿ ಯೋಜನೆಯ ಪ್ರಯೋಜನ ಪಡೆಯಲು ವಿದ್ಯುತ್ ಬಳಕೆಯ ಸರಾಸರಿ 200 ಯೂನಿಟ್ ಮೀರಿರಬಾರದು. ಗ್ರಾಹಕರು ಜುಲೈ 25ರ ನಂತರ ಅರ್ಜಿ ಸಲ್ಲಿಸಿದರೆ ಅವರಿಗೆ ಆಗಸ್ಟ್ ತಿಂಗಳಲ್ಲಿ ಬರುವ ಬಿಲ್‌ನಲ್ಲಿ ಪ್ರಯೋಜನ ಸಿಗುವುದಿಲ್ಲ. ಆದರೆ, ಯೋಜನೆಯ ಪ್ರಯೋಜನವನ್ನು ಸೆಪ್ಟೆಂಬರ್ ತಿಂಗಳಲ್ಲಿ ಪಡೆಯಲಿದ್ದಾರೆ. ಹೀಗಾಗಿ, ಯೋಜನೆಯ ಪ್ರಯೋಜನ ಪಡೆಯಲು ತಕ್ಷಣವೇ ನೋಂದಣಿ ಮಾಡಿಕೊಳ್ಳಬೇಕು ಎಂದೂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಗೃಹಜ್ಯೋತಿ’ ಯೋಜನೆಗೆ ನೋಂದಣಿ ಮಾಡುವುದು ಹೇಗೆ?

‘ಗೃಹಜ್ಯೋತಿ’ ಯೋಜನೆಗೆ ನೋಂದಣಿ ಮಾಡುವಾಗ ಫಲಾನುಭವಿಗಳು ಆಧಾರ್ ಕಾರ್ಡ್, ಗ್ರಾಹಕರ ಐಡಿ ಮಾಹಿತಿ (ವಿದ್ಯುಚ್ಛಕ್ತಿ ಬಿಲ್‌ನಲ್ಲಿ ಇರುವಂತೆ) ಮತ್ತು ಮೊಬೈಲ್‌ ನಂಬರ್‌ ಬೇಕು. ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿಗೆ ವೆಬ್​ಸೈಟ್​ ವಿಳಾಸ https://sevasindhugs.karnataka.gov.in. ಸಂಪರ್ಕಿಸಬಹುದು. ಮೊಬೈಲ್, ಕಂಪ್ಯೂಟರ್, ಲ್ಯಾಪ್​ಟಾಪ್​ನಲ್ಲೂ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1912 ಸಂಪರ್ಕಿಸಿ ಎಂದು ಇಂಧನ ಇಲಾಖೆ ಹೇಳಿದೆ.

  • ಎಸ್ಕಾಂ ಹೆಸರು
  • ಖಾತೆ ಸಂಖ್ಯೆ
  • ಖಾತೆದಾರರ ಹೆಸರು ಎಸ್ಕಾಂ ನಲ್ಲಿರುವಂತೆ
  • ಖಾತೆದಾರರ ವಿಳಾಸ ಎಸ್ಕಾಂ ನಲ್ಲಿರುವಂತೆ
  • ಎಸ್ಕಾಂ ಹೆಸರು1
  • ಬಳಕೆದಾರರ ವಿಧ (ಇಲ್ಲಿ ಎರಡು ಆಯ್ಕೆಗಳಿದ್ದು ಬಾಡಿಗೆದಾರರು/ ಮಾಲೀಕರು) ಎಂದಿದೆ
  • ಆಧಾರ್ ಸಂಖ್ಯೆ
  • ಅರ್ಜಿದಾರರ ಹೆಸರು
  • ಸಂವಹನಕ್ಕಾಗಿ ದೂರವಾಣಿ ಸಂಖ್ಯೆ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!