Tuesday, November 24, 2026

ಪ್ರಾಯೋಗಿಕ ಆವೃತ್ತಿ

‘ಗೃಹಲಕ್ಷ್ಮಿ’ ಸಹಕಾರ ಸಂಘ ಸೇರುವ ಮಹಿಳೆಯರಿಗೆ ಸಿಗಲಿದೆ ಸಾಲ ಸೌಲಭ್ಯ !

ರಾಜ್ಯ ಸರ್ಕಾರವು 2000 ಗೃಹಲಕ್ಷ್ಮಿ ಹಣ ಪಡೆಯುತ್ತಿರುವ ಫಲಾನುಭವಿಗಳಿಗಾಗಿ ಗೃಹಲಕ್ಷ್ಮಿ ಸಹಕಾರ ಸಂಘಗಳನ್ನು ಅಸ್ತಿತ್ವಕ್ಕೆ ತರಲು ಮುಂದಾಗಿದೆ. ಈ ಸಂಘಕ್ಕೆ ಸದಸ್ಯರಾದವರು ಪ್ರತಿ ತಿಂಗಳು 200 ರೂಪಾಯಿ ಹಣ ಕಟ್ಟಿಕೊಂಡು ಹೋಗಬೇಕು, 6 ತಿಂಗಳು ಆದ ಬಳಿಕ ಸಾಲ ಸೌಲಭ್ಯ ಪಡೆಯಲು ಅರ್ಹರಾಗುತ್ತಾರೆ.

ಮಹಿಳಾ ಮತ್ತು ಮಕ್ಕಳ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಲಾಗಿದ್ದು, ಹೆಚ್ಚು ಕಂಡೀಷನ್‌ಗಳನ್ನು ಹಾಕದೇ ಅರ್ಹರನ್ನು ಗುರುತಿಸಿ ಸಾಲ ನೀಡಲು ಉದ್ದೇಶಿಸಲಾಗಿದೆ. ಇದರ ಜತೆಗೆ  ಆರೋಗ್ಯ ವಿಮೆಯನ್ನು ನೀಡುವ ಯೋಚನೆ ಇದೆ ಸಚಿವೆ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಹೇಳಿದರು.

ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ನೋಂದಾಯಿತರಾಗಿರುವ ನೀವು ನಿಮ್ಮ ಹಳ್ಳಿಯ ಅಂಗನವಾಡಿಯನ್ನು ಭೇಟಿ ಮಾಡಿ ಅಥವಾ ನಿಮ್ಮ ತಾಲ್ಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ(CDPO) ಕಚೇರಿಯನ್ನು ಭೇಟಿ ಮಾಡಿ ನಿಗದಿತ ಅರ್ಜಿ ನಮೂನೆಯನ್ನು ₹1,000 ಷೇರು ಹಣ ಪಾವತಿಸಿ ಗೃಹಲಕ್ಷ್ಮಿ ಸಹಕಾರ ಸಂಘ ಸದಸ್ಯತ್ವ ಪಡೆಯಬೇಕು.

ಗೃಹಲಕ್ಷ್ಮಿ ಸಹಕಾರ ಸಂಘ ಹೇಗೆ ಕಾರ್ಯನಿರ್ವಹಿಸುತ್ತದೆ ಇದರಿಂದಾಗುವ ಪ್ರಯೋಜನಗಳೇನು?

ಗೃಹಲಕ್ಷ್ಮಿ ಸಹಕಾರ ಸಂಘಕ್ಕೆ ಸದಸ್ಯರಾಗಲು, ನೀವು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿರಬೇಕು, ₹1,000 ಷೇರು ಹಣ ಪಾವತಿಸಿ ಸದಸ್ಯತ್ವ ಪಡೆಯಬೇಕು, ಪ್ರತಿ ತಿಂಗಳು ಕನಿಷ್ಠ ₹200 ಉಳಿತಾಯ ಮಾಡಬೇಕು, ಮತ್ತು ಸತತ 6 ತಿಂಗಳು ಉಳಿತಾಯ ಮಾಡಿದ ನಂತರ ₹30,000 ರಿಂದ ₹3 ಲಕ್ಷದವರೆಗೆ ಸಾಲ ಪಡೆಯಲು ಅರ್ಹರಾಗುತ್ತೀರಿ. ಸಂಘದಲ್ಲಿ ಸಂಪೂರ್ಣ ಕ್ಯಾಶ್‌ಲೆಸ್ ವ್ಯವಹಾರ ನಡೆಯಲಿದೆ ಮತ್ತು ಸಾಲಕ್ಕೆ ಯಾವುದೇ ಜಾಮೀನು ಅಥವಾ ಶೂರಿಟಿಯ ಅವಶ್ಯಕತೆ ಇರುವುದಿಲ್ಲ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ