Friday, October 18, 2024

ಪ್ರಾಯೋಗಿಕ ಆವೃತ್ತಿ

ದಸರಾ ಸಂಭ್ರಮಕ್ಕೆ ಗೃಹಲಕ್ಷ್ಮಿ ಹಣದ ಗಿಫ್ಟ್ : ಲಕ್ಷ್ಮೀ ಹೆಬ್ಬಾಳ್ಕರ್

ನಾಡಿನ ಜನತೆ ದಸರಾ ಸಂಭ್ರಮದಲ್ಲಿರುವ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹಿಳೆಯರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಕಳೆದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಇದೇ ಅ.7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ”ರಾಜ್ಯದ ಯಜಮಾನಿಯರ ಖಾತೆಗೆ ಎರಡೂ ಕಂತಿನ ಹಣವನ್ನು ಹಾಕಲಾಗುವುದು. ಕೆಲವೊಂದು ತಾಂತ್ರಿಕ ಕಾರಣಗಳಿಂದ ಹಣ‌ ಹಾಕುವುದು ವಿಳಂಬವಾಗಿತ್ತು. ಈ ಲಕ್ಷ್ಮೀ ಹೆಬ್ಬಾಳಕರ್ ಹಿಡಿದ ಕೆಲಸವನ್ನು ಮಾಡದೇ ಬಿಡುವುದಿಲ್ಲ. ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ‌ ತಂದಿದ್ದೇ ಲಕ್ಷ್ಮೀ ಹೆಬ್ಬಾಳಕರ್ ಅಂತ ಸಿಎಂ ಸಿದ್ದರಾಮಯ್ಯ ನನ್ನ ಬಗ್ಗೆ ಹೇಳಿದ್ದಾರೆ. ಹೀಗಾಗಿ ಗೃಹಲಕ್ಷ್ಮಿ ಯೋಜನೆ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ” ಎಂದು ಭರವಸೆ ನೀಡಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!