Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಅತಿಥಿ ಉಪನ್ಯಾಸಕರ ಸೇವಾ ಹಿರಿತನ ಪರಿಗಣಿಸಲು ಆಗ್ರಹ

ಹತ್ತಾರು ವರ್ಷಗಳಿಂದ ನಿರಂತರ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಾ ಬಂದ ಅತಿಥಿ ಉಪನ್ಯಾಸಕರನ್ನು ಸೇವಾ ಹಿರಿತನ ಆಧಾರದಲ್ಲಿ ಪರಿಗಣಿಸಬೇಕು. ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಯು.ಟಿ.ಸಿ, ನಾನ್-ಯು.ಜಿ.ಸಿ ಎಂಬ ತಾರತಮ್ಯವ ಮಾಡದೇ ಶಾಸನ ಬದ್ದ ಸರ್ಕಾರದ ಹಂತದಲ್ಲೇ ಮಾನವೀಯ ದೃಷ್ಠಿಯಿಂದ ತೀರ್ಮಾನ ಕೈಗೊಳ್ಳಬೇಕೆಂದು ಆಗ್ರಹಿಸಿ ಮಂಡ್ಯದಲ್ಲಿ ಅತಿಥಿ ಉಪನ್ಯಾಸಕರು ಮಂಡ್ಯ ಜಿಲ್ಲಾಧಿಕಾರಿ ಕಚೇರಿಗೆ ಸೋಮವಾರ ಮನವಿ ಸಲ್ಲಿಸಿದ್ದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ 2025-26 ನೇ ಸಾಲಿನ ಬಿಕ್ಕಟ್ಟನ್ನು ಶಾಸನ ಬದ್ಧ ಸರ್ಕಾರದ ಹಂತದಲ್ಲೇ ಯು.ಜಿ.ಸಿ/ನಾನ್-ಯು.ಜಿ.ಸಿ ಎಂಬ ತಾರತಮ್ಯ ಮಾಡದೇ ನಿರ್ಣಯ ಕೈಗೊಳ್ಳುವಂತೆ ಮನವಿ ಮಾಡಿದರು.

ರಾಜ್ಯದ 432 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹತ್ತು, ಹದಿನೈದು ಮತ್ತು ಇಪ್ಪತ್ತಕ್ಕೂ ಹೆಚ್ಚು ವರ್ಷಗಳ ಕಾಲಗಳಿಂದ 11 ಸಾವಿರ ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಾ ಬಂದಿದ್ದು, ಇವರಲ್ಲಿ 5,623 ಅತಿಥಿ ಉಪನ್ಯಾಸಕರು ಯುಜಿಸಿ ಅರ್ಹತೆ ಪಡೆದವರಿದ್ದು, ಉಳಿದ 5,353 ಅತಿಥಿ ಉಪನ್ಯಾಸಕರು ನಾನ್-ಯುಜಿಸಿ ಗಳಾಗಿರುತ್ತಾರೆ. ಅದೇ ರೀತಿ ಸಾವಿರಾರು ಅತಿಥಿ ಉಪನ್ಯಾಸಕರು ಎಂ. ಫೀಲ್ ಪದವಿ ಪಡೆದವರು ಸಹ ಇದ್ದಾರೆ. ಇವರೆಲ್ಲರೂ ಹತ್ತಾರೂ ವರ್ಷಗಳ ಕಾಲ ಬೋಧನಾ ಅನುಭವ, ಬೋಧನಾ ಕೌಶಲ್ಯ ಹೊಂದಿ ಇದುವರೆಗೂ ಗುಣಮಟ್ಟದ ಪಾಠ ಪ್ರವಚನ ಮಾಡುತ್ತಾ ಲಕ್ಷಾಂತರ ವಿದ್ಯಾರ್ಥಿಗಳ ಬಾಳಿಗೆ ದಾರಿ ದೀಪವಾಗಿದ್ದಾರೆ. ಆದ್ದರಿಂದ ಅತಿಥಿ ಉಪನ್ಯಾಸಕರ ಸೇವೆಯಲ್ಲಿ ಪರಿಗಣಿಸಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಆಗ್ರಹಿಸಿದರು.

ರಾಜ್ಯದ ಶೇಕಡ 70ರಷ್ಟು ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಸೇವೆಯನ್ನು ಅವಲಂಭಿಸಿವೆ. ಕಳೆದ ಒಂದು ತಿಂಗಳಿಂದ ಸರಿಯಾಗಿ ವಿದ್ಯಾರ್ಥಿಗಳಿಗೆ ಪಾಠ ಪ್ರವಚನಗಳು ನಡೆಯುತ್ತಿಲ್ಲ. ಜೊತೆಗೆ ಇದೇ ವೃತ್ತಿಯನ್ನು ನಂಬಿ ದಶಕಗಳಿಂದ ಪಾಠ ಪ್ರವಚನ ಮಾಡುತ್ತಾ ಬಂದಿರುವ ಅತಿಥಿ ಉಪನ್ಯಾಸಕರ ಬದುಕು ಈಗ ಆತಂತ್ರವಾಗಿದೆ. ಕಳೆದ ಒಂದೂವರೆ ತಿಂಗಳಿಂದ ಗೌರವಧನವೂ ಇಲ್ಲದೆ ಬದುಕು ಮತ್ತು ನಮ್ಮಗಳನ್ನೇ ನಂಬಿರುವ ಕುಟುಂಬಗಳ ಸ್ಥಿತಿಯು ಹೇಳತೀರದಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸನಬದ್ದ ಅಧಿಕಾರವಿರುವುದು ಶಾಸಕಾಂಗಕ್ಕೆ, ಶಾಸಕಾಂಗವೇ ಕಾನೂನಿನ ನಿರ್ಮಾಪಕನಾಗಿರುವುದರಿಂದ ಹತ್ತಾರು ದಶಕಗಳಿಂದ ನಮ್ಮಿಂದ ತಾತ್ಕಾಲಿಕ ಸೇವೆ ಪಡೆದ ಸರ್ಕಾರ ಮತ್ತು ಇಲಾಖೆ ನಮ್ಮನ್ನು ತಾತ್ಕಾಲಿಕ ಸೇವೆಯಲ್ಲಿ ಉಳಿಸಿಕೊಳ್ಳಲು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಸರ್ಕಾರವೇ ತೀರ್ಮಾನ ಕೈಗೊಳ್ಳಬೇಕೆಂದು ಕೋರಿದರು.

ಈ ಸಂದರ್ಭದಲ್ಲಿ ದಿಲೀಪ್ ಟಿ.ಕೆ., ರಾಜೇಂದ್ರ ಸಿಂಗ್ ಬಾಬು, ರವಿ ಹಾಗೂ ಸಂಜಯ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ