Friday, November 20, 2026

ಪ್ರಾಯೋಗಿಕ ಆವೃತ್ತಿ

ಒಗ್ಗಟ್ಟನ್ನು ಎತ್ತಿ ಹಿಡಿಯುವ ಅಭಿವೃದ್ಧಿ ಕೆಲಸಗಳ ಅಗತ್ಯವಿದೆ ; ಹೆಚ್.ಡಿ.ದೇವೇಗೌಡ

ಸಮುದಾಯದ ಒಗ್ಗಟ್ಟನ್ನು ಎತ್ತಿ ಹಿಡಿಯುವಂತ ಅಭಿವೃದ್ಧಿ ಕೆಲಸಗಳ ಅಗತ್ಯವಿದೆ ಎಂದು ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ.ದೇವೇಗೌಡರು ಹೇಳಿದರು.

ಮಳವಳ್ಳಿ ಪಟ್ಟಣದ ಶ್ರೀರಾಮ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಶ್ರೀರಾಮ ಒಕ್ಕಲಿಗರ ಸಮುದಾಯ ಭವನದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು, ಈ ಕ್ಷೇತ್ರಕ್ಕೂ ನನಗೂ ಅವಿನಾಭಾವ ಸಂಬಂಧವಿದೆ ಇಂದಿನ ಕಾರ್ಯಕ್ರಮಕ್ಕೆ ಹೆಚ್.ಡಿ. ಕುಮಾರಸ್ವಾಮಿ ಆಗಮಿಸಬೇಕಿತ್ತು, ಹಲವಾರು ಕಾರ್ಯಕ್ರಮಗಳ ಒತ್ತಡದಿಂದ ಬರಲು ಸಾಧ್ಯವಾಗಲಿಲ್ಲ‌ ಎಂದರು.

ಮಾಜಿ ಶಾಸಕ ಡಾ.ಕೆ.ಅನ್ನದಾನಿ ಮಾತನಾಡಿ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ದೇವೇಗೌಡ ರವರು ಈ ದೇಶದ ಪ್ರಧಾನಿಯಾಗಿದ್ದಾಗ ರೈತರು, ಹಿಂದುಳಿದ ವರ್ಗಗಳು, ದಲಿತರ ಪರವಾದ ಹಲವಾರು ಕಾರ್ಯಕ್ರಮಗಳನ್ನು ನೀಡುವ ಮೂಲಕ‌ ಡಾ. ಅಂಬೇಡ್ಕರ್ ರವರ ಸಂವಿಧಾನದ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ, ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡ ರವರು ರಾಮ ಸಮುದಾಯ ಭವನವನ್ನು ಉದ್ಘಾಟನೆ ಮಾಡುವ ಮೂಲಕ ಈ ಕಾರ್ಯಕ್ರಮ ಇತಿಹಾಸದ ಪುಟದಲ್ಲಿ ಸೇರಲಿದೆ ಎಂದರು.

ಈ ಸಂದರ್ಭದಲ್ಲಿ ಕಪ್ಪಡಿ ಕ್ಷೇತ್ರದ ಪೀಠಾಧಿಪತಿಗಳಾದ ವರ್ಚಸ್ವಿ ಶ್ರೀಕಂಠದತ್ತ ಸಿದ್ಧಲಿಂಗರಾಜೇ ಅರಸ್, ಜಿ.ಪಂ.ಮಾಜಿ ಸದಸ್ಯ ಎಂ.ಸಿ.ವೀರೇಗೌಡ, ಮಾಜಿ ಪುರಸಭಾ ಅಧ್ಯಕ್ಷ ಎಂ.ಎಚ್.ಕೆಂಪಯ್ಯ, ಚಿಕ್ಕ ರಾಜು,ಪುರಸಭೆ ಉಪಾಧ್ಯಕ್ಷ ಜಯಸಿಂಹ, ಸದಸ್ಯರುಗಳಾದ ನಂದಕುಮಾರ್, ರಾಧ ನಾಗರಾಜು. ಮುಖಂಡ ರಾದ ಬಸವರಾಜು. ಸ್ವಾಮಿ. ಕುಮಾರ. ಪುಟ್ಟರಾಜು. ರಮೇಶ್. ಚೌಡಪ್ಪ ಸೇರಿದಂತೆ ಇತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ