Saturday, July 13, 2024

ಪ್ರಾಯೋಗಿಕ ಆವೃತ್ತಿ

ಹೆಚ್.ಡಿ.ದೇವೆಗೌಡರ ಜನ್ಮದಿನ : ವಿಶೇಷ ಪೂಜೆ

ಇಂದು ಮಾಜಿ ಪ್ರಧಾನ ಮಂತ್ರಿ,ಜೆಡಿಎಸ್ ವರಿಷ್ಟ ಎಚ್.ಡಿ ದೇವೇಗೌಡರ ಜನ್ಮದಿನದ ಪ್ರಯುಕ್ತ ಜೆಡಿಎಸ್ ಕಾರ್ಯಕರ್ತರು ಮಂಡ್ಯದ ವಿದ್ಯಾನಗರದಲ್ಲಿರುವ ಗಣಪತಿ ದೇವಸ್ಥಾನದಲ್ಲಿ ದೇವೇಗೌಡರ ಹೆಸರಿನಲ್ಲಿ ಅರ್ಚನೆ ಮತ್ತು ವಿಶೇಷ ಪೂಜೆ ಸಲ್ಲಿಸಿದರು.

ಜಿಲ್ಲಾಧ್ಯಕ್ಷ ಡಿ.ರಮೇಶ್ ಹಾಗೂ ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಬಿ.ಆರ್.ರಾಮಚಂದ್ರು ನೇತೃತ್ವದಲ್ಲಿ ಹಲವು ಜೆಡಿಎಸ್ ಕಾರ್ಯಕರ್ತರು ದೇವೇಗೌಡರಿಗೆ ಜನ್ಮದಿನದ ಶುಭಾಶಯ ಕೋರಿದರು. ವಿದ್ಯಾಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ, ದೇವೇಗೌಡರ ಹೆಸರಿನಲ್ಲಿ ಅರ್ಚನೆ ಮಾಡಿಸಿದರು.

ಈ ದೇಶ ಕಂಡ ಜನಾನುರಾಗಿ ರಾಜಕಾರಣಿ ದೇವೇಗೌಡರು 90 ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದು ನಮಗೆಲ್ಲರಿಗೂ ಸಂತಸ ತಂದಿದೆ.ರಾಜ್ಯದಲ್ಲಿ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಪಕ್ಷವನ್ನು ಮುನ್ನಡೆಸುತ್ತಿರುವ ದೇವೇಗೌಡರಿಗೆ ದೇವರು ಇನ್ನೂ ಹೆಚ್ಚಿನ ಆಯಸ್ಸು, ಆರೋಗ್ಯ ನೀಡಲಿ ಎಂದು ಕಾರ್ಯಕರ್ತರು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.

ನಂತರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಗೆ ಹಣ್ಣುಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮನ್ಮುಲ್ ಉಪಾಧ್ಯಕ್ಷ ರಘುನಂದನ್,ಡಿಸಿಸಿ ಬ್ಯಾಂಕ್ ನಿರ್ದೇಶಕ ಕಾಳೇಗೌಡ, ನಗರಸಭಾ ಸದಸ್ಯರಾದ ನಾಗೇಶ್,ಮೀನಾಕ್ಷಿ ಪುಟ್ಟಸ್ವಾಮಿ,ಜೆಡಿಎಸ್ ಮುಖಂಡರಾದ ಬಿ.ಆರ್.ಸುರೇಶ್, ಮಹಾಲಿಂಗೇಗೌಡ,ಅನಿಲ್ ಕುಮಾರ್, ತುಳಸೀಧರ್,
ನೀನಾ ಪಟೇಲ್ ಸೇರಿದಂತೆ ಹಲವರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!