ಕಾವೇರಿ ವಿಷಯದಲ್ಲಿ ಕಾಂಗ್ರೆಸ್ಸಿನದು ಸದಾ ಎರಡು ನಾಲಿಗೆ! ಕಾವೇರಿ ಪಾಲಿಗೆ ಆ ಪಕ್ಷ ನಯವಂಚನೆ, ನಂಬಿಕೆ ದ್ರೋಹದ ಪ್ರತೀಕ.ಅಧಿಕಾರಕ್ಕೆ ಬಂದು 100 ದಿನ ಕಳೆಯುವ ಮುನ್ನವೇ ಕೊಳ್ಳಿ ಇಡುವ ಕೆಲಸ ಮಾಡಿಬಿಟ್ಟಿದೆ. ಈ ಅನ್ಯಾಯ ಸಹಿಸುವ ಪ್ರಶ್ನೆಯೇ ಇಲ್ಲ.ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು. ಸಂಕಷ್ಟಸೂತ್ರದ ಪಾಲನೆಗೆ ಒತ್ತಡ ಹೇರಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕಾವೇರಿ ವಿಷಯದಲ್ಲಿ ಕಾಂಗ್ರೆಸ್ಸಿನದು ಸದಾ ಎರಡು ನಾಲಿಗೆ! ಕಾವೇರಿ ಪಾಲಿಗೆ ಆ ಪಕ್ಷ ನಯವಂಚನೆ,ನಂಬಿಕೆ ದ್ರೋಹದ ಪ್ರತೀಕ.ಅಧಿಕಾರಕ್ಕೆ ಬಂದು 100 ದಿನ ಕಳೆಯುವ ಮುನ್ನವೇ ಕೊಳ್ಳಿ ಇಡುವ ಕೆಲಸ ಮಾಡಿಬಿಟ್ಟಿದೆ.ಈ ಅನ್ಯಾಯ ಸಹಿಸುವ ಪ್ರಶ್ನೆಯೇ ಇಲ್ಲ.ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು. ಸಂಕಷ್ಟಸೂತ್ರದ ಪಾಲನೆಗೆ ಒತ್ತಡ ಹೇರಬೇಕು.9/9
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 17, 2023
“>ಮೇಕೆದಾಟು ಪಾದಯಾತ್ರೆ ಹೈಡ್ರಾಮಾ ಆಡಿ, ಕನ್ನಡಿಗರ ತಲೆ ಮೇಲೆ ಮಕ್ಮಲ್ ಟೋಪಿ ಇಟ್ಟ ಕಾಂಗ್ರೆಸ್, ಈಗ I.N.D.I.A.ಗೆ ಜೀವದಾನ ಮಾಡಲು ರಾಜ್ಯದ ಕಾವೇರಿ ಹಿತವನ್ನೇ ಬಲಿದಾನ ಮಾಡಿದೆ. ಅಂದುಕೊಂಡಿದ್ದೇ ಆಗಿದ್ದು,ನಮ್ಮ ಭಯ ನಿಜವಾಗಿದೆ, ಕಾಂಗ್ರೆಸ್ ಸರಕಾರ ಕನ್ನಡಿಗರಿಗೆ, ಅದರಲ್ಲೂ ಅನ್ನದಾತರಿಗೆ ಘೋರ ವಿಶ್ವಾಸದ್ರೋಹ ಎಸಗಿದೆ ಎಂದು ದೂರಿದ್ದಾರೆ.
ಕನ್ನಡಿಗರು ಕೊಟ್ಟ ಪೆನ್ ಈಗ ಗನ್ ರೂಪ ತಳೆದಿದೆಯಾ ಹೇಗೆ? ಕನ್ನಡಿಗರನ್ನು ಕೇಳಿಕೇಳಿ ಪಡೆದುಕೊಂಡ ಪೆನ್ ಈಗ ಪೆಚ್ಚಗೆ, ತೆಪ್ಪಗೆ ಮಲಗಿದೆಯಾ? ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರವೇ ರಾಜ್ಯದ ಜಲ ಸಂಕಷ್ಟದ ಬಗ್ಗೆ ಸಭೆಯಲ್ಲೇ ಅಂಕಿ-ಅಂಶ ಸಮೇತ ಹೇಳಿದೆ. ಪಾಪ.. ಜಲ ಸಂಪನ್ಮೂಲ ಸಚಿವರಿಗೆ ಈ ಬಗ್ಗೆ ಮಾಹಿತಿ ಇಲ್ಲವೇ? ಎಂದು ಅವರು ಪ್ರಶ್ನಿಸಿದ್ಧಾರೆ.




