Saturday, November 21, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಹೆಚ್.ಡಿ.ಕುಮಾರಸ್ವಾಮಿ ಹುಟ್ಟುಹಬ್ಬ ; ವಿಶೇಷ ಪೂಜೆ

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮುಂದಿನ ದಿನಗಳಲ್ಲಿ ಒಳ್ಳೆಯ ಅಧಿಕಾರ ಸಿಕ್ಕಿ ಜನಸೇವೆ ಮಾಡುವ ಅವಕಾಶ ಸಿಗಲಿ ಎಂದು ಜೆಡಿಎಸ್ ಮುಖಂಡ ಬಿ.ಆರ್.ರಾಮಚಂದ್ರ ತಿಳಿಸಿದರು.

ಮಂಡ್ಯ ನಗರದ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರ ಸ್ವಾಮಿರವರ ಹುಟ್ಟುಹಬ್ಬದ ಅಂಗವಾಗಿ ಜೆಡಿಎಸ್ ಕಾರ್ಯಕರ್ತರೊಂದಿಗೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು.

ಎಚ್.ಡಿ.ಕುಮಾರಸ್ವಾಮಿ ಅವರಿಗೆ ದೇವರು ಆರೋಗ್ಯ,ಆಯಸ್ಸು ಕೊಟ್ಟು ಜನಸೇವೆಗೆ ಅವಕಾಶ ಕೊಡಲಿ.ಅವರಿಗೆ ರಾಜ್ಯದ ಜನತೆ ಇನ್ನೂ ಉತ್ತಮ ಅಧಿಕಾರ ನೀಡಿ ಆಶೀರ್ವದಿಸಿದರೆ ಅಭಿವೃದ್ಧಿ ಪರ್ವ ನಡೆಯಲಿದೆ ಎಂದು ಹೇಳಿದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್ ಮಾತನಾಡಿ, ಅಪರೂಪದ ವ್ಯಕ್ತಿತ್ವ, ಬಡವರು ಹಾಗೂ ದೀನದಲಿತರು, ರೈತರ ಬಾಳಿನಲ್ಲಿ ಸದಾಕಾಲ ಇರುವ ಎಚ್.ಡಿ. ಕುಮಾರಸ್ವಾಮಿ ಅವರ 66ನೇ ವರ್ಷಕ್ಕೆ ಪಾದಾರ್ಪಣೆ ಮಾಡಿರುವ ಈ ಸುಸಂದರ್ಭದಲ್ಲಿ ಇಡೀ ರಾಜ್ಯಾದ್ಯಂತ ವಿಶೇಷವಾಗಿ ಅವರದೇ ಲೋಕಸಭಾ ಕ್ಷೇತ್ರ ಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ತಾಲೂಕು ಕೇಂದ್ರಗಳಲ್ಲಿ ದೇವರಿಗೆ ಪೂಜೆ ಸಲ್ಲಿಸಿ, ಆಸ್ಪತ್ರೆಗಳಲ್ಲಿ ಹಣ್ಣು ಹಂಪಲು ವಿತರಣೆ ಮಾಡುವ ಮೂಲಕ ಸರಳವಾಗಿ ಹುಟ್ಟುಹಬ್ಬ ಆಚರಿಸಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ , ಮಾಜಿ ಶಾಸಕ ಜಿ.ಬಿ.ಶಿವಕುಮಾರ್, ಮೈಷುಗರ್ ಮಾಜಿ ಅಧ್ಯಕ್ಷ ಸಿದ್ದರಾಮೇಗೌಡ, ನಗರಸಭೆ ಅಧ್ಯಕ್ಷ ನಾಗೇಶ್, ನಗರಸಭೆ ಸದಸ್ಯರಾದ ಮಂಜುಳಾ ಉದಯಶಂಕರ್, ಮೀನಾಕ್ಷಿ ಪುಟ್ಟಸ್ವಾಮಿ, ರಾಮಲಿಂಗಯ್ಯ,ರವಿ,ಜೆಡಿಎಸ್ ಮುಖಂಡರಾದ ಬಿ‌.ಆರ್.ಸುರೇಶ್,ಹೇಮಂತ್, ಸಾತನೂರು ಜಯರಾಮ್, ಅಬ್ಬಾಸ್ ಅಲಿ ಬೋಹ್ರ,ನಗರಸಭೆ ಮಾಜಿ ಅಧ್ಯಕ್ಷೆ ನಾಗಮ್ಮ, ಪದ್ಮಾವತಿ ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ