ಕರ್ನಾಟಕ ಸಂಘದ ವತಿಯಿಂದ ಹ.ಕ.ರಾಜೇಗೌಡ ಸಂಶೋಧನಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜೂನ್ 17 ರ ಸಂಜೆ 5ಗಂಟೆಗೆ ಮಂಡ್ಯನಗರದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಡಾ.ಪ್ರೊ.ಜಯಪ್ರಕಾಶ್‌ಗೌಡ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹ.ಕ.ರಾಜೇಗೌಡ ಹೆಸರಿನಲ್ಲಿ ಎರಡನೇ ವರ್ಷದ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಪ್ರಸಿದ್ದ ವಿದ್ವಾಂಸ ಡಾ.ಟಿ.ವಿ.ವೆಂಕಟಾಚಲಶಾಸ್ತ್ರಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ವಿಶ್ವಮಾನವ ಕ್ಷೇತ್ರದ ಪುರುಷೋತ್ತಮಾನಂದನಾಥ ಸ್ವಾಮೀಜಿ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ದಿನೇಶ್‌ಗೂಳಿಗೌಡ ಅಧ್ಯಕ್ಷತೆ ವಹಿಸಿ ಡಾ.ಟಿ.ವಿ.ವೆಂಕಟಾಚಲಶಾಸ್ತ್ರಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಹೇಳಿದರು.
ವಿಶ್ರಾಂತ ಕುಲಪತಿ ಡಾ.ಪದ್ಮಾಶೇಕರ್ ಅಭಿನಂದನಾ ನುಡಿಗಳನ್ನಾಡಲಿದ್ದು, ಹ.ಕ.ರಾಜೇಗೌಡ ಅವರ ಸುಪುತ್ರ ಹೆಚ್.ಆರ್.ದಿನೇಶ್‌ಚಂದ್ರ ಉಪಸ್ಥಿತರಿರಲಿದ್ದಾರೆ ಎಂದು ವಿವರಿಸಿದರು.
ಗೋಷ್ಠಿಯಲ್ಲಿ ಸಂಘದ ಖಜಾಂಚಿ ಮಂಜುಳ ಉದಯಶಂಕರ್, ನಿರ್ದೇಶಕ ಹೆಚ್.ಬಿ.ನಾಗಪ್ಪ ಇದ್ದರು




