Thursday, October 10, 2024

ಪ್ರಾಯೋಗಿಕ ಆವೃತ್ತಿ

ಹೆಚ್.ಕೆ‌‌.ರಾಮು ಪರ ಮತಯಾಚಿಸಿದ ಶಾಸಕ ಡಿ.ಸಿ.ತಮ್ಮಣ್ಣ

ವಿಧಾನ ಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ಕೆ‌.ರಾಮು ಗೆಲ್ಲಿಸಿಕೊಳ್ಳಲು ಕೊನೆ ಕ್ಷಣದ ಕಸರತ್ತುಗಳನ್ನು ನಡೆಸುತ್ತಿದ್ದು, ಮದ್ದೂರು ಕ್ಷೇತ್ರದ ಶಾಸಕ ಡಿ.ಸಿ‌.ತಮ್ಮಣ್ಣ ಇಂದು ಕೂಡ ಮತಯಾಚಿಸಿದರು.

ಮದ್ದೂರು ಪಟ್ಟಣದ ಸರ್ಕಾರಿ ಮಹಿಳಾ ಕಾಲೇಜಿನ ಮತಗಟ್ಟೆ ಸಂಖ್ಯೆ 24 B ರಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ಕೆ.ರಾಮು ಅವರ ಪರವಾಗಿ ಶಾಸಕ ಡಿ.ಸಿ.ತಮ್ಮಣ ಮತದಾನ ಮಾಡಿದ ನಂತರ ಮತದಾರರಲ್ಲಿ ಜೆಡಿಎಸ್ ಅಭ್ಯರ್ಥಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವಂತೆ ಮನವಿ ಮಾಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಕಳೆದ ಬಾರಿ ನಮ್ಮ ಅಭ್ಯರ್ಥಿ ಕೆ.ಟಿ.ಶ್ರೀಕಂಠೇಗೌಡ ಜಯಗಳಿಸಿದ್ದರು‌. ಶಿಕ್ಷಕರು ಹಾಗೂ ಪದವೀಧರರ ಪರವಾಗಿ ಸಾಕಷ್ಟು ಹೋರಾಟಗಳನ್ನು ಮಾಡಿ ಅವರ ಬೆಂಬಲಕ್ಕೆ ನಿಂತಿದ್ದಾರೆ. ಹಾಗೂ ಅವರ ಪರವಾಗಿ ವಿಧಾನ ಪರಿಷತ್ ನ ಮೇಲ್ಮನೆಯಲ್ಲೂ ಸಹ ಧ್ವನಿ ಎತ್ತಿ ಸಾಕಷ್ಟು ಸಮಸ್ಯೆಗಳನ್ನು ಬಗೆಹರಿಸಿದ್ದಾರೆ. ಹಾಗಾಗಿ ಮತ್ತೊಮ್ಮೆ ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಮತದಾರರು ಸ್ಪಂದಿಸುತ್ತಿದ್ದು, ತಮ್ಮ ಅಭ್ಯರ್ಥಿಯ ಗೆಲುವು ನಿಶ್ಚಿತ ಎಂದು ಭವಿಷ್ಯ ನುಡಿದರು.

ಬೆಳಗ್ಗೆ ಎಂಟು ಗಂಟೆಗೆ ಆರಂಭವಾದ ಮತದಾನ ಪ್ರಕ್ರಿಯೆಗೆ ಪದವೀಧರ ಮತದಾರರು ಬಹಳ ಉತ್ಸಾಹದಿಂದಲೇ ಮತ ಚಲಾಯಿಸುತ್ತಿದ್ದುದು ಕಂಡುಬಂತು.

ಅದರಲ್ಲೂ ವಿಶೇಷವಾಗಿ ಮಹಿಳೆಯರು ಉತ್ಸಾಹದಿಂದ ಪಾಲ್ಗೊಂಡಿದ್ದು ಕಂಡುಬಂದಿತು.

ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಮತ್ತು ರೈತ ಸಂಘದ ಕಾರ್ಯಕರ್ತರು ತಮ್ಮ ತಮ್ಮ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದರು. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಹಾಗೂ ರೈತಸಂಘದ ಕಾರ್ಯಕರ್ತರು ಕೈ ಮುಗಿದು ತಮ್ಮ ಅಭ್ಯರ್ಥಿಗಳ ಪರವಾಗಿ ಮತ ಕೇಳುತ್ತಿದ್ದುದು ವಿಶೇಷವಾಗಿತ್ತು.
ಮಧ್ಯಾಹ್ನವಾಗುತ್ತಿದ್ದಂತೆ ಮತದಾನ ಮತ್ತಷ್ಟು ಚುರುಕು ಪಡೆದುಕೂಂಡಿದ್ದು, ಮತದಾರರು ಸರದಿಯ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಮಾದನಾಯಕನಹಳ್ಳಿ ರಾಜಣ್ಣ, ಪುರಸಭಾ ಸದಸ್ಯ ಮಹೇಶ್, ಮುಖಂಡರಾದ ಫೈರೋಜ್,
ಟಿ.ಆರ್. ಪ್ರಸನ್ನ,ಚಿಕ್ಕ ತಿಮ್ಮೇಗೌಡ, ಕೆಂಗಲ್ ಗೌಡ, ಕೂಳಗೆರೆ ಶೇಖರ, ಬಿಳಿಯಪ್ಪ, ಚಾಮನಹಳ್ಳಿ ಸ್ವಾಮಿಗೌಡ, ಮಹೇಶ್, ರಾಖಿ, ಚಂದ್ರಶೇಖರ್ ಇತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!