Friday, September 20, 2024

ಪ್ರಾಯೋಗಿಕ ಆವೃತ್ತಿ

ರೈತರು-ಜನಸಾಮಾನ್ಯರ ಬದುಕು ಹಸನಾಗಲು ಜೆಡಿಎಸ್ ಅಧಿಕಾರಕ್ಕೆ ತನ್ನಿ : ಹೆಚ್.ಟಿ. ಮಂಜು

ರೈತರು, ಜನಸಾಮಾನ್ಯರು, ಕಾರ್ಮಿಕರ ಬದುಕು ಹಸನಾಗಬೇಕಾದರೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ತರಬೇಕೆಂದು ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಚ್.ಟಿ.ಮಂಜು ಮನವಿ ಮಾಡಿದರು.

ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿ ಚಿಕ್ಕಗಾಡಿಗನಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಪಕ್ಷದ ಮಹತ್ವದ ಪಂಚರತ್ನ ಯೋಜನೆಗಳ ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕುಮಾರಸ್ವಾಮಿ ಅವರು ರಾಜ್ಯದ ಜನರ ಅಭಿವೃದ್ಧಿಗೆ ಪಂಚರತ್ನ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಇಂದು ಮನುಷ್ಯನ ಆರೋಗ್ಯದಲ್ಲಿ ವ್ಯತ್ಯಾಸಗಳಾದರೆ ದೂರದ ಮೈಸೂರು, ಬೆಂಗಳೂರಿನ ಆಸ್ಪತ್ರೆಗಳಿಗೆ ಹೋಗಬೇಕು. ಆದರೆ ಜೆಡಿಎಸ್ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶಗಳಲ್ಲಿ ಎಲ್ಲಾ ಆರೋಗ್ಯ ಸೌಲಭ್ಯಗಳನ್ನು ಒಳಗೊಂಡ ಸುಸಜ್ಜಿತ ಆಸ್ಪತ್ರೆ ತೆರೆಯಲಾಗುವುದು.ಗ್ರಾಮೀಣ ಭಾಗದ ಜನರ ಮಕ್ಕಳು ದುಬಾರಿ ಶುಲ್ಕ ಕೊಟ್ಟು ಕಾನ್ವೆಂಟ್ ಗಳಲ್ಲಿ ಓದಿಸಲು ಆಗುವುದಿಲ್ಲ. ಇದನ್ನು ಮನಗಂಡ ಕುಮಾರಸ್ವಾಮಿ ಅವರು ಗ್ರಾಮೀಣ ಭಾಗದಲ್ಲಿ ಹೈಟೆಕ್ ಶಾಲೆ ನಿರ್ಮಿಸಿ ಉಚಿತ ಶಿಕ್ಷಣ ನೀಡಲಿದ್ದಾರೆ ಎಂದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ವಿ.ಎಸ್.ಧನಂಜಯಕುಮಾರ್ ಮಾತನಾಡಿ,
ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಅವರು ತಮ್ಮ ಆರೋಗ್ಯವನ್ನು ಲೆಕ್ಕಿಸದೆ ರಾಜ್ಯಾದ್ಯಂತ ಸಂಚರಿಸಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಹಗಲಿರುಳು ಶ್ರಮಿಸುತ್ತಿದ್ದಾರೆ. ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಹಂತಹಂತವಾಗಿ ಪಂಚರತ್ನ ಯೋಜನೆಗಳನ್ನು ಅನುಷ್ಠಾನಗೊಳಿಸಲು ಈಗಾಗಲೇ ಯೋಜನೆ ರೂಪಿಸಲಾಗಿದೆ ಎಂದರು.

ಹೆಚ್.ಟಿ. ಮಂಜು ಅಂತಹ ಉತ್ತಮ ಅಭ್ಯರ್ಥಿಗೆ ಜೆಡಿಎಸ್ ವರಿಷ್ಠರು ಟಿಕೆಟ್ ಘೋಷಣೆ ಮಾಡಿದ್ದಾರೆ.ಹೆಚ್.ಟಿ. ಮಂಜು ಅವರು ಒಬ್ಬ ಸಾಮಾನ್ಯ ರೈತನ ಮಗ. ರೈತರ ಕಷ್ಟ ಸುಖಗಳ ಬಗ್ಗೆ ಅರಿವನ್ನು ತಿಳಿದಿದ್ದಾರೆ. ಡೇರಿ ಅಧ್ಯಕ್ಷರಾಗಿ, ಸೊಸೈಟಿ ಅಧ್ಯಕ್ಷರಾಗಿ,ಜಿ.ಪಂ.ಸದಸ್ಯರಾಗಿ, ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಪ್ರಸ್ತುತ ಮನ್ಮುಲ್ ನಿರ್ದೇಶಕರಾಗಿ ಉತ್ತಮವಾಗಿ ಕೆಲಸಮಾಡುತ್ತಿದ್ದಾರೆ. ಯುವಕರಾಗಿರುವ ಅವರು, ಜೆಡಿಎಸ್ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಮೂಲಕ ಮಾಜಿ ಪ್ರಧಾನಿ ದೇವೇಗೌಡ್ರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಕೈಬಲಪಡಿಸೋಣ ಎಂದು ಮತದಾರರಲ್ಲಿ ಮನವಿ ಮಾಡಿದರು. ಇದೇ ಸಮಯದಲ್ಲಿ ಗ್ರಾಮದ ಕೆಲವು ಮುಖಂಡರು ಹಾಗೂ ಯುವಕರು ಕಾಂಗ್ರೆಸ್ ಬಿಜೆಪಿ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ತಾಲೂಕು ಜೆಡಿಎಸ್ ಅಧ್ಯಕ್ಷ ಜಾನಕೀರಾಂ, ಸಂಗಾಪುರ ಪುಟ್ಟಸ್ವಾಮಿಗೌಡ, ರವಿಕುಮಾರ್, ಎಂಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಹೊಸಹೊಳಲು ಅಶೋಕ್, ತಾ.ಪಂ.ಮಾಜಿ‌ ಸದಸ್ಯ ಯಳವೇಗೌಡ, ಸೋಮಶೇಖರ್, ಪರಮೇಶ್ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!