ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಜಾ.ದಳ (ಜೆಡಿಎಸ್) ಅಭ್ಯರ್ಥಿ ಹೆಚ್.ಟಿ.ಮಂಜು ಪಟ್ಟಣದ ಪ್ರಮುಖ ರಸ್ತೆಯಲ್ಲಿ ಭರ್ಜರಿ ರೋಡ್ ಷೋ ನಡೆಸಿ ಶಕ್ತಿ ಪ್ರದರ್ಶನ ಮಾಡಿ, ಕೆ.ಆರ್.ಪೇಟೆ ಪಟ್ಟಣದ ತಾಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.
ರಾಜ್ಯದ ರೈತರ ಧ್ವನಿಯಾಗಿ ಕೆಲಸ ಮಾಡಿ, ಪಂಚರತ್ನ ಯೋಜನೆಯನ್ನು ಅನುಷ್ಠಾನಗೊಳಿಸಲು ಮಾತೃ ಹೃದಯಿ ಮುಖ್ಯಮಂತ್ರಿ ಕುಮಾರಣ್ಣ ಅವರು ರಾಜ್ಯದ ಮುಖ್ಯಮಂತ್ರಿ ಮಾಡಲು ಜೆಡಿಎಸ್ ಪ್ರಾದೇಶಿಕ ಪಕ್ಷವನ್ನು ಬೆಂಬಲಿಸಿ ತಮಗೆ ಭರ್ಜರಿ ಗೆಲುವನ್ನು ತಂದುಕೊಡಬೇಕು ಎಂದು ಹೆಚ್.ಟಿ.ಮಂಜು ಮನವಿ ಮಾಡಿದರು.

ಜೆಡಿಎಸ್ ಕಾರ್ಯಕರ್ತರ ಹುಮ್ಮಸ್ಸು, ನಾಮಪತ್ರ ಸಲ್ಲಿಕೆಯ ಕಾರ್ಯಕ್ರಮಕ್ಕೆ ಹರಿದು ಬಂದಿರುವ ಜನಪ್ರವಾಹ ವನ್ನು ಗಮನಿಸಿದರೆ ತಮ್ಮ ಗೆಲುವು ನಿಶ್ಚಿತವಾಗಿದೆ. ತಾಲ್ಲೂಕಿನ ಪ್ರಬುದ್ಧ ಮತದಾರ ಬಂಧುಗಳು ದಕ್ಷ ಪ್ರಾಮಾಣಿಕ ಆಡಳಿತ ನೀಡಲು ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ತಮ್ಮನ್ನು ಬೆಂಬಲಿಸುವಂತೆ ಕೈಮುಗಿದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್, ರಾಜ್ಯ ಸಹಕಾರ ಮಾರಾಟ ಮಹಾ ಮಂಡಲದ ನಿರ್ದೇಶಕ ಚೋಳೇನಹಳ್ಳಿ ಪುಟ್ಟಸ್ವಾಮಿಗೌಡ, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಜಾನಕೀ ರಾಂ, ಪತ್ನಿ ರಮಾಮಣಿ, ತಾಯಿ ಜಯಮ್ಮ, ಮುಖಂಡರಾದ ಎಂ.ಬಿ.ಹರೀಶ್, ನಿರ್ದೇಶಕ ಡಾಲು ರವಿ, ತಾಲೂಕು ಜೆಡಿಎಸ್ ಅಧ್ಯಕ್ಷ ಜಾನಕೀ ರಾಂ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಅಶೋಕ್ ಮತ್ತಿತರರು ಉಪಸ್ಥಿತರಿದ್ದರು.




