Tuesday, June 25, 2024

ಪ್ರಾಯೋಗಿಕ ಆವೃತ್ತಿ

ಹೆಚ್.ಕೆ.ರಾಮು ಬೆಂಬಲಿಸಲು ಮನವಿ

ಜೂ.13ರಂದು ನಡೆಯಲಿರುವ ದಕ್ಷಿಣ ಪದವೀಧರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಚ್.ಕೆ.ರಾಮುರವರನ್ನು ಪದವೀಧರ ಮತದಾರರು ಪ್ರಥಮ ಪ್ರಾಶಸ್ಯದ ಮತ ನೀಡುವ ಮೂಲಕ ಬೆಂಬಲಿಸಿ ಗೆಲ್ಲಿಸಬೇಕೆಂದು ಜೆಡಿಎಸ್ ಯುವಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಕ್ರಾಂತಿಸಿಂಹ ಮನವಿ ಮಾಡಿದರು.

ಮಂಡ್ಯದಲ್ಲಿ‌ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಹೆಚ್.ಕೆ.ರಾಮುರವರು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ನೌಕರರ ಏಳಿಗೆಗೆ ಶ್ರಮಿಸಿದ್ದಾರೆ. ಜೊತೆಗೆ ಪದವೀಧರರ ಒಡನಾಟದಲ್ಲಿದ್ದು ಶಿಕ್ಷಕರ ಹಾಗೂ ಪದವೀಧರರ ಸಮಸ್ಯೆಗಳನ್ನು ಚೆನ್ನಾಗಿ ಅರಿತಿದ್ದು ಇವರ ಸಮಸ್ಯೆಗಳ ಪರಿಹಾರಕ್ಕೆ ಗಟ್ಟಿ ಧ್ವನಿ ಎತ್ತುವ ಶಕ್ತಿ ಇದೆ.ಜೆಡಿಎಸ್ ಪಕ್ಷ ಯಾವಾಗಲೂ ಶಿಕ್ಷಣ ರಂಗಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿದೆ ಎಂದರು.

ಹೆಚ್.ಡಿ.ದೇವೇಗೌಡರವರು ಮುಖ್ಯ ಮಂತ್ರಿಯಾಗಿದ್ದಾಗ ಸಾವಿರಾರು ಶಿಕ್ಷಕರ ನೇಮಕಕ್ಕೆ ಒತ್ತು ನೀಡಿದ್ದರು. ಹೆಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯಾದ್ಯಂತ 400 ಪ್ರೌಢ ಶಾಲೆ, 600 ಪಿ.ಯು. ಕಾಲೇಜು,290 ಪದವಿ ಕಾಲೇಜುಗಳ ಆರಂಭಕ್ಕೆ ಅನುಮತಿ ನೀಡಿದ್ದರು. ಇದನ್ನು ಪರಿಗಣಿಸಿ ಹೆಚ್.ಕೆ.ರಾಮುರವರು ಪದವೀಧರರು, ಶಿಕ್ಷಕರು, ಸರ್ಕಾರಿ ನೌಕರರ ಒಳಿತಿಗಾಗಿ ವಿಧಾನ ಪರಿಷತ್‌ನಲ್ಲಿ ಕ್ರಿಯಾಶೀಲವಾಗಿ ಕಾರ್ಯನ್ಮುಖರಾಗುವರು ಎಂದರು.

ಬಸವಣ್ಣ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ವಿಶ್ವ ಮಾನವ ಕುವೆಂಪು ರವರನ್ನು ತೇಜೋವಧೆ ಮಾಡುವ ನಿಟ್ಟಿನಲ್ಲಿ ಪಠ್ಯ ಪುಸ್ತಕಗಳ ರಚನೆ ಮಾಡಿರುವುದು ದುರಂತ, ವಿದ್ಯಾರ್ಥಿ ಯುವ ಜನರು ಸಮಾಜದಲ್ಲಿ ಶಾಂತಿ ನೆಲೆಸಲು ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕೆಂದು ಮನವಿ ಮಾಡಿದರು.

ಗಿರಿಜಮ್ಮ, ಮಂಚಶೆಟ್ಟಿ, ಮಹೇಂದ್ರ, ಸಿದ್ದಪ್ಪಾಜಿ, ರಕ್ಷಿತ್‌ಕುಮಾರ್ ಉಪಸ್ಥಿತರಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!