Friday, September 20, 2024

ಪ್ರಾಯೋಗಿಕ ಆವೃತ್ತಿ

ಹೆಣ್ಣು ಭ್ರೂಣಹತ್ಯೆ ಪ್ರಕರಣ| ಹಾಡ್ಯ-ಹುಳ್ಳೇನಹಳ್ಳಿಗೆ ದೌಡಾಯಿಸಿ ಅಧಿಕಾರಿಗಳ ದಂಡು

ಮಂಡ್ಯ ತಾಲ್ಲೂಕಿನ  ಹಾಡ್ಯ- ಹುಳ್ಳೇನಹಳ್ಳಿಯಲ್ಲಿ ನಡೆಯುತ್ತಿದ್ದ ಹೆಣ್ಣು ಭ್ರೂಣ ಪತ್ತೆ ಪ್ರಕರಣದ ಇಡೀ ರಾಜ್ಯದಾದ್ಯಂತ ಸದ್ದು ಮಾಡಿದೆ, ಈ ಹಿನ್ನೆಲೆಯಲ್ಲಿ ತಡವಾಗಿ ಎಚ್ಚೆತ್ತುಕೊಂಡಿರುವ ಮಂಡ್ಯ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಮಂಗಳವಾರ ಸ್ಕ್ಯಾನಿಂಗ್ ನಡೆಯುತ್ತಿದ್ದ ಅಲೆಮನೆಗೆ ಭೇಟಿ ನೀಡಿದ ಪರಿಶೀಲನೆ ನಡೆಸಿದರು.

ಇತ್ತೀಚೆಗೆ ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆಯ ಪೊಲೀಸರು ಈ ಜಾಲವನ್ನು ಪತ್ತೆ ಹಚ್ಚಿ ನಾಲ್ವರು ವೈದ್ಯರು ಸೇರಿದಂತೆ 9 ಮಂದಿ ಆರೋಪಿಗಳನ್ನು ಬಂಧಿಸಿದ್ದರು.

ಡಿಎಚ್ಓ – ಎಸಿ ಭೇಟಿ

ಹಾಡ್ಯದ ಆಲೆಮನೆಗೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಮೋಹನ್, ಉಪ ವಿಭಾಗಾಧಿಕಾರಿ ಶಿವಮೂರ್ತಿ, ತಹಶೀಲ್ದಾರ್ ಶಿವಕುಮಾರ್ ಬೀರಾದರ್ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ಕೈಗೊಂಡಿತು.
ಹಾಡ್ಯ, ಹುಳ್ಳೇನಹಳ್ಳಿ ಗ್ರಾಮಗಳ ನಡುವೆ ಇರುವ ಆಲೆಮನೆ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳವನ್ನು ಸಂಪೂರ್ಣವಾಗಿ ಪರಿಶೀಲಿಸಿತು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಮೋಹನ್ ಮಾತನಾಡಿ,  ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆಗೆ ಬಳಸಿಕೊಂಡಿದ್ದಾರೆ ಎಂಬ ಪ್ರದೇಶಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಲಾಗಿದೆ., ಆದರೆ ಇಲ್ಲಿ
ಯಾವುದೇ ಕುರುಹು ಇಲ್ಲ. ಜಿಲ್ಲೆಯ ಆಲೆಮನೆ ಒಂಟಿ ಶೆಡ್ ಗಳ ಪರಿಶೀಲನೆಗೆ ವಿಶೇಷ ತಂಡ ರಚಿಸಲಾಗಿದೆ. ಈ ಸಂಬಂಧ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ, ಸದರಿ ಪ್ರಕರಣದಲ್ಲಿ.ವರದಿ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಮೂರು ಜನ ಆರೋಪಿಗಳ ಮಾಹಿತಿ ತಿಳಿದಿದೆ ಎಂದು ಹೇಳಿದರು.

55 ಸ್ಕ್ಯಾನಿಂಗ್ ಸೆಂಟರ್ ನೋಂದಣಿ

ಮಂಡ್ಯ ಜಿಲ್ಲೆಯಲ್ಲಿ 55 ಸ್ಕ್ಯಾನಿಂಗ್ ಸೆಂಟರ್ ನೋಂದಣಿ ಆಗಿವೆ. ಸಾರ್ವಜನಿಕರು ಎಚ್ಚೆತ್ತುಕೊಂಡು ಇಂತಹ ಸಮಾಜ ವಿರೋಧಿ, ಕಾನೂನು ಬಾಹಿರ ಕೃತ್ಯ ಕಂಡು ಬಂದರೆ ತಕ್ಷಣ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು.

ಮಂಡ್ಯ ಉಪವಿಭಾಗಾಧಿಕಾರಿ ಶಿವಮೂರ್ತಿ ಮಾತನಾಡಿ,  ಹೆಣ್ಣು ಭ್ರೂಣ ಲಿಂಗ ಪತ್ತೆ ಬಳಿಕ ಗರ್ಭಪಾತ ಮಾಡಿಸುತ್ತಿದ್ದ ಜಾಲ ಪತ್ತೆಯಾದ ಬೆನ್ನೆಲ್ಲೆ ಜಿಲ್ಲಾಧಿಕಾರಿ ತಂಡ ರಚನೆ ಮಾಡಿದ್ದಾರೆ. ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದೆ. ಸ್ಥಳೀಯರ ಮಾಹಿತಿ ಪಡೆದು ವರದಿ ಕೊಡಲಾಗುವುದು, ಸದ್ಯಕ್ಕೆ ಈ  ಪ್ರದೇಶದಲ್ಲಿ ಯಾವುದೇ ಕುರುಹು ಸಿಕ್ಕಿಲ್ಲ, ಸುತ್ತಮುತ್ತಲಿನಲ್ಲಿ ಪ್ರದೇಶವನ್ನು ಸಂಪೂರ್ಣ ಪರಿಶೀಲನೆ ಮಾಡಲಾಗುವುದು, ಪ್ರಕರಣದಲ್ಲಿ ಯಾರನ್ನು ಸಹ ರಕ್ಷಣೆ ಮಾಡುವ ಪ್ರಮೇಯ ಇಲ್ಲ. ಜಿಲ್ಲೆಯಲ್ಲಿ ಇಂತಹ ಕೃತ್ಯ ನಡೆಯದಂತೆ ಕ್ರಮ ಕ್ರಮ ವಹಿಸಲು ಟಾಸ್ಕ್ ಫೋರ್ಸ್ ರಚಿಸುತ್ತೇವೆ, ಬೆಂಗಳೂರು ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಿಂದ ವರದಿ ತರಿಸಿಕೊಳ್ಳಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ವಿವರಿಸಿದರು.

ಇದೇ ವೇಳೆ ಲೋಕಾಯುಕ್ತ ಡಿವೈಎಸ್ಪಿ ಸುನಿಲ್ ಕುಮಾರ್ ಹಾಗೂ ಲೋಕಾಯುಕ್ತ ಪೊಲೀಸರು, ಪ್ರಕರಣ ಕುರಿತು ಸ್ಥಳೀಯರಿಂದ ಮಾಹಿತಿ ಪಡೆದರು, ಆಲೆಮನೆ ಮಾಲೀಕರು, ಕೃತ್ಯದಲ್ಲಿ ಭಾಗಿಯಾದವರ ಬಗ್ಗೆ ಮಾಹಿತಿ ಸಂಗ್ರಹ ಮಾಡಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!