Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ದಸಂಸ ಕಾರ್ಯಕರ್ತರಿಂದ ಅರೆಬೆತ್ತಲೆ ಮೆರವಣಿಗೆ

ಕೋಲಾರ ಯಲಹಳ್ಳಿಯಲ್ಲಿ ವಸತಿ ಶಾಲಾ ಮಕ್ಕಳಿಂದ ಮಲಗುಂಡಿ ಸ್ವಚ್ಛಗೊಳಿಸಿದ ಘಟನೆ, ಹೆಣ್ಣುಭ್ರೂಣ ಹತ್ಯೆ ಕರಾಳ ದಂಧೆ ಹಾಗೂ ವಂಟಮೂರು ಗ್ರಾಮದಲ್ಲಿ ಮಹಿಳೆ ವಿವಸ್ತ್ರ ಹಾಗೂ ಪ್ರಕರಣ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಮಂಡ್ಯದಲ್ಲಿ ಅರೆ ಬೆತ್ತಲೆ ಮೆರವಣಿಗೆ ನಡೆಸಿದರು.

ಮಂಡ್ಯನಗರದ ಸಂಜಯ ಮೆರವಣಿಗೆ ಹೊರಟ ಸಮಿತಿಯ ಕಾರ್ಯಕರ್ತರು ಅರೆ ಬೆತ್ತಲೆಯಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಕರಾಳ ದಂಧೆ ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ.ಸಾವಿರಾರು ಸಂಖ್ಯೆಯಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆದಿರುವುದು ಸಾಮಾಜಿಕವಾಗಿ ಮಹಿಳಾ ವಿರೋಧಿ ಮನಸ್ಥಿತಿ ಅನಾವರಣಗೊಂಡಿದೆ ಈ ಕೂಡಲೇ ರಾಜ್ಯ ಸರ್ಕಾರ ರಾಜ್ಯದ ಜನರ ಕ್ಷಮೆಯಾಚಿಸಬೇಕು, ಪ್ರಕರಣದ ಎಲ್ಲಾ ರೋಪಿಗಳಿಗೆ ಗಲ್ಲು ಶಿಕ್ಷೆಗೆ ಗುರಿಪಡಿಸುವ ಕಾನೂನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.ನುದಿ

ಕೋಲಾರ ಜಿಲ್ಲೆ ಮಾಲೂರು ತಾಲೂಕು ಯಲಹಳ್ಳಿ ಗ್ರಾಮದ ಮೊರಾರ್ಜಿ ವಸತಿ ಶಾಲಾ ಮಕ್ಕಳಿಂದ ಮಲಗುಂಡಿ ಸ್ವಚ್ಛಗೊಳಿಸಿದ ಪ್ರಕರಣದ ನೈತಿಕ ಹೊಣೆ ಹೊತ್ತು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ರಾಜೀನಾಮೆ ನೀಡಬೇಕು, ಶಾಲೆಯ ಪ್ರಾಂಶುಪಾಲರು ಮತ್ತು ಸಿಬ್ಬಂದಿಯನ್ನು ಸೇವೆಯಿಂದ ವಜಾ ಗೊಳಿಸಬೇಕು ಎಂದು ಆಗ್ರಹಿಸಿದರು.

ಬೆಳಗಾವಿ ಜಿಲ್ಲೆಯ ವಂಟಮೂರು ಗ್ರಾಮದಲ್ಲಿ ಮಹಿಳೆ ವಿವಸ್ತ್ರ ಗೊಳಿಸಿ ಅಮಾನುಷವಾಗಿ ದೌರ್ಜನ್ಯ ನಡೆಸಿದ ಪ್ರಕರಣದ ಆರೋಪಿಗಳಿನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು, ಸಂತ್ರಸ್ತ ಮಹಿಳೆಗೆ ಕನಿಷ್ಠ 25 ಲಕ್ಷ ಪರಿಹಾರ ಜೊತೆಗೆ ಪುರ್ನವಸತಿ ಕಲ್ಪಿಸಬೇಕು, ಮಹಿಳೆ ಮತ್ತು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣ ಹಾಗೂ ಪೋಕ್ಸೋ ಪ್ರಕರಣಗಳ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ವಿಶೇಷ ಕಾನೂನು ಜಾರಿ ಮಾಡಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ, ಜಿಲ್ಲಾಧ್ಯಕ್ಷ ಕೆ.ಎಂ ಶ್ರೀನಿವಾಸ್, ಎಸ್.ಕುಮಾರ್,ಶೆಟ್ಟಹಳ್ಳಿ ಸುರೇಶ್ ಕುಮಾರ್, ಬಿ.ಆನಂದ,ಸೋಮಶೇಖರ್ ಮೇನಾಗ್ರ, ಗೀತಾ ಮೇಲುಕೋಟೆ, ಭಾಗ್ಯ ಆತಗೂರು, ಬಲರಾಮ ನೇತೃತ್ವ ವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!