Friday, September 20, 2024

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣ| ಕಾವೇರಿ ನದಿಗಿಳಿದು ರೈತರಿಂದ ಅರೆಬೆತ್ತಲೆ ಪ್ರತಿಭಟನೆ

ಕೆ.ಆರ್.ಎಸ್ ನಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ರೈತರು ಶ್ರೀರಂಗಪಟ್ಟಣದ ಬಳಿ ಕಾವೇರಿ ನದಿಗಿಳಿದು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.

ಶ್ರೀರಂಗಪಟ್ಟಣದಲ್ಲಿ ಭೂಮಿ ತಾಯಿ ಹೋರಾಟ ಸಮಿತಿ ಆಶ್ರಯದಲ್ಲಿ ಹಲವು ರೈತರು ಕಾವೇರಿ ನದಿಯ ಸ್ನಾನಘಟ್ಟದ ಬಳಿ ನೀರಿಗಿಳಿದು ಅರೆ ಬೆತ್ತಲೆ ಪ್ರತಿಭಟಿಸಿದರು.

ಅರೆಬೆತ್ತಲೆ ಮೆರವಣಿಗೆ ಮೂಲಕ ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಸಿದ ರೈತರು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಕ್ಕೆ ಮಣಿದು , ತಮಿಳುನಾಡಿಗೆ 5,000 ಕ್ಯೂಸೆಕ್ ನೀರು ಹರಿಸುತ್ತಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ರೈತರು, ಜನರಿಗೆ ನೀರಿಲ್ಲದಂತೆ ಮಾಡಿದೆ. ಇದರಿಂದ ಬೆಳೆ ಬೆಳೆದ ರೈತರಿಗೆ ದಿಕ್ಕು ತೋಚದಂತಾಗಿದೆ. ಕೂಡಲೇ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರೈತ ನಾಯಕ ಕೆ.ಎಸ್.ನಂಜುಂಡೇಗೌಡ, ಹನಿಯಂಬಾಡಿ ನಾಗರಾಜು, ಶಿವಣ್ಣ,ಬೋರೇಗೌಡ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!