Friday, November 20, 2026

ಪ್ರಾಯೋಗಿಕ ಆವೃತ್ತಿ

ಕೈ-ಕಾಲು-ತಲೆ ಕತ್ತರಿಸಿದ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ

ಮಂಡ್ಯ ತಾಲ್ಲೂಕಿನ ಕೆರಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ವಿ.ಸಿ.ನಾಲೆಯಲ್ಲಿ ಸುಮಾರು 35 ರಿಂದ 40 ವಯೋಮಾನದ ಗಂಡಸಿನ ಶವ ಕತ್ತರಿಸಿದ ರೀತಿಯಲ್ಲಿ ಇಂದು ಮಧ್ಯಾಹ್ನ ಪತ್ತೆಯಾಗಿದೆ.

ಶವದ ಕಾಲು, ಕೈಗಳು, ಸೊಂಟದ ಭಾಗ ಕತ್ತರಿಸಿದ ಸ್ಥಿತಿಯಲ್ಲಿ ಇರುವುದನ್ನು ಕಂಡು ಸಾರ್ವಜನಿಕರು ಆತಂಕ ಗೊಂಡಿದ್ದಾರೆ.ಎಲ್ಲೋ ಬೇರೆಡೆ ಕೊಲೆ ಮಾಡಿ ಇಲ್ಲಿಗೆ ತಂದು ಹಾಕಿರಬೇಕೆಂದು ಪೋಲಿಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಶವದ ಎಡಗೈಯಲ್ಲಿ ಕಾವ್ಯ ರಘು ಎಂದು ಹಸಿರು ಹಚ್ಚೆ ಹಾಕಿರುವುದು, ಬಲ ಮುಂಗೈಯಲ್ಲಿ ಕಪ್ಪು ದಾರ ಇರುತ್ತದೆ. ಈ ಬಗ್ಗೆ ಯಾವುದೇ ಮಾಹಿತಿಗಳಿದ್ದಲ್ಲಿ ಕೂಡಲೇ ಕೆರಗೋಡು ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ. PSI: 9480804851

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ