Thursday, June 13, 2024

ಪ್ರಾಯೋಗಿಕ ಆವೃತ್ತಿ

ಕೈಮಗ್ಗ ನೇಕಾರರಿಂದ ಅರ್ಜಿ ಆಹ್ವಾನ

ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2022-23ನೇ ಸಾಲಿಗೆ ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ಅರ್ಹ ಕೈಮಗ್ಗ ನೇಕಾರರಿಂದ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಹ ಕೈಮಗ್ಗ ನೇಕಾರರು ರಾಷ್ಟ್ರೀಕೃತ ಬ್ಯಾಂಕಿನಿಂದ ಕೈಮಗ್ಗ ನೇಯ್ಗೆ ಚಟುವಟಿಕೆಗಾಗಿ ರೂ.50,000/- ರಿಂದ ರೂ 2,00,000/-ಗಳವರೆಗೆ ಆರ್ಥಿಕ ಸಾಲ-ಸೌಲಭ್ಯ ಪಡೆಯಲು ಅವಕಾಶವಿದ್ದು, ಅರ್ಹ ಕೈಮಗ್ಗ ನೇಕಾರರು ಅರ್ಜಿಗಳನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಮಂಡ್ಯ ಜಿಲ್ಲಾ ಪಂಚಾಯತ್ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರ ಕಛೇರಿಯ ದೂ.ಸಂ:08232-222366 ಸಂಪಕಿಸಬಹುದೆಂದು ಮಂಡ್ಯ ಜಿಲ್ಲಾ ಪಂಚಾಯತ್ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!