ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೋರ್ವ ಮನೆಯಲ್ಲಿ ನಾಲ್ಕು ದಿನಗಳ ಹಿಂದೆಯೇ ನೇಣು ಹಾಕಿಕೊಂಡು ಮೃತಪಟ್ಟಿರುವ ಘಟನೆ ಶ್ರೀರಂಗಪಟ್ಟಣ ಪುರಸಭಾ ವ್ಯಾಪ್ತಿಯಲ್ಲಿ ನಡೆದಿದೆ.
ಗಂಜಾಂನ ಶ್ರೀರಂಗ (50) ಆತ್ಮಹತ್ಯೆಗೆ ಶರಣಾದವರು. ಮೃತ ಶ್ರೀರಂಗ ಕಳೆದ ನಾಲ್ಕು ದಿನಗಳ ಹಿಂದೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಬುಧವಾರ ಬೆಳಿಗ್ಗೆ ಮನೆಯಿಂದ ದುರ್ವಾಸನೆ ಬರುತಿದ್ದುದ್ದರಿಂದ ಸುತ್ತಮುತ್ತಲಿನ ಮನೆಯ ನಿವಾಸಿಗಳು ಅನುಮಾನ ಗೊಂಡು ಮನೆಯ ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಶವ ಸಂಪೂರ್ಣವಾಗಿ ಕೊಳೆತ ಸ್ಥಿತಿಯಲ್ಲಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವ ಕೆಳಗಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಸಂಬಂಧಿಕರಿಗೆ ಹಸ್ತಾಂತರಿಸಿದ್ದಾರೆ.