Thursday, November 19, 2026

ಪ್ರಾಯೋಗಿಕ ಆವೃತ್ತಿ

ಮದ್ದೂರು | ವಿವಿಧೆಡೆ  ವಿಜೃಂಭಣೆಯಿಂದ ನೆರವೇರಿದ ಹನುಮ ಜಯಂತಿ

ವರದಿ : ಪ್ರಭು ಎಸ್.ವಿ. 

ಮದ್ದೂರು ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ  ಹನುಮ  ಜಯಂತಿ ಅಂಗವಾಗಿ ವಿವಿಧ ಪೂಜಾ ವಿಧಿ ವಿಧಾನಗಳು ವಿಜೃಂಭಣೆಯಿಂದ ನೆರವೇರಿದವು.

ತಾಲೂಕಿನ ತೊಪ್ಪನಹಳ್ಳಿ ಮುತ್ತುರಾಯಸ್ವಾಮಿ, ಬ್ಯಾಡರಹಳ್ಳಿ ಆಂಜನೇಯ, ತಿಪ್ಪೂರು ಮಾರುತಿ ದೇವಾಲಯ ಸೇರಿದಂತೆ ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಹೊಳೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಗುರುವಾರ ಬೆಳಿಗ್ಗಿನಿಂದಲೇ ಮಧು ಅಭಿಷೇಕ, ಪಂಚಾಮೃತ ಅಭಿಷೇಕ್, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು.

ಬೆಳಿಗ್ಗೆ 11 ಗಂಟೆಗೆ ದೇವಾಲಯದ ಸುತ್ತಲು ರಾಮದೇವರ ರಥೋತ್ಸವ ಅಪಾರ ಭಕ್ತಾದಿಗಳ ಸಮ್ಮುಖದಲ್ಲಿ ನೆರವೇರಿತಲ್ಲದೇ ವಿವಿಧ ಜಿಲ್ಲೆ ಹಾಗೂ ತಾಲೂಕುಗಳಿಂದ ಆಗಮಿಸಿದ್ದ ಅಪಾರ ಸಂಖ್ಯೆಯ ಭಕ್ತಾದಿಗಳು ರಥವನ್ನು ಎಳೆಯುವ ಮೂಲಕ ತಮ್ಮ ಹರಕೆ ಹವನಗಳನ್ನು ತೀರಿಸಿದರು.

ಹನುಮದ್ ಜಯಂತಿ ಅಂಗವಾಗಿ ದೇವಾಲಯವನ್ನು ತಳಿರು, ತೋರಣಗಳಿಂದ ಸಿಂಗರಿಸಿ ದೇವರ ಮೂರ್ತಿಗೆ ವಿವಿಧ ಪುಷ್ಪಗಳಿಂದ ಅಲಂಕಾರ ಕೈಗೊಂಡಿದರಲ್ಲದೇ ಅಪಾರ ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.

ದೇವಾಲಯಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿತ್ತಲ್ಲದೇ ಪ್ರಧಾನ ಅರ್ಚಕ ಪ್ರದೀಪ್ ಅಚಾರ್ಯ ವಿವಿಧ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿಕೊಟ್ಟರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ