Wednesday, September 18, 2024

ಪ್ರಾಯೋಗಿಕ ಆವೃತ್ತಿ

ಹರಿಯಾಣ ವಿಧಾನಸಭೆ ಚುನಾವಣೆ | ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ ವಿನೇಶ್ ಫೋಗಟ್, ಬಜರಂಗ್ ಪುನಿಯಾ

ಹರಿಯಾಣ ವಿಧಾನಸಭೆ ಚುನಾವಣೆಯ ಕಾಂಗ್ರೆಸ್ ಟಿಕೆಟ್ ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ ಲಭ್ಯವಾಗಲಿದೆ ಎಂದು ಊಹಾಪೋಹಗಳ ನಡುವೆ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರು ಕಾಂಗ್ರೆಸ್ ಸಂಸದ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಬುಧವಾರ ಭೇಟಿಯಾಗಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ನೂರು ಗ್ರಾಂ ತೂಕ ಹೆಚ್ಚಿದ ಕಾರಣ ಅನರ್ಹಗೊಂಡ ವಿನೇಶ್ ಫೋಗಟ್ ಪ್ಯಾರಿಸ್‌ನಿಂದ ಹಿಂದಿರುಗಿದ ಬಳಿಕ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರು ಭೇಟಿಯಾಗಿದ್ದರು. ಈ ಭೇಟಿಯ ಬಳಿಕ ಹೂಡಾ, “ಪಕ್ಷಕ್ಕೆ ಸೇರಲು ಬಯಸುವ ಪ್ರತಿಯೊಬ್ಬರನ್ನು ಕಾಂಗ್ರೆಸ್ ಸ್ವಾಗತಿಸುತ್ತದೆ” ಎಂಬ ಹೇಳಿಕೆಯನ್ನು ನೀಡಿ ವಿನೇಶ್ ಕಾಂಗ್ರೆಸ್ ಸೇರುವ ಸುಳಿವು ನೀಡಿದ್ದರು.

“ಕ್ರೀಡಾಪಟು ಯಾವುದೇ ನಿರ್ದಿಷ್ಟ ಪಕ್ಷ ಅಥವಾ ರಾಜ್ಯಕ್ಕೆ ಸೇರಿದವರಾಗಿರುವುದಿಲ್ಲ. ಒಬ್ಬ ಕ್ರೀಡಾಪಟು ಇಡೀ ರಾಷ್ಟ್ರಕ್ಕೆ ಸೇರಿದವರು. ಅವರು (ವಿನೇಶ್ ಫೋಗಟ್) ಇಡೀ ರಾಷ್ಟ್ರಕ್ಕೆ ಸೇರಿದವರು. ಯಾವುದೇ ಪಕ್ಷಕ್ಕೆ ಸೇರಬೇಕೋ ಬೇಡವೋ ಎಂಬುದು ಅವರ ಆಯ್ಕೆ. ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರೂ ಅವರನ್ನು ಸ್ವಾಗತಿಸುತ್ತೇವೆ. ಏನು ಮಾಡಬೇಕೆಂಬುದು ಅವರ ನಿರ್ಧಾರ” ಎಂದು ಹೂಡಾ ಹೇಳಿದ್ದರು.

ವಿನೇಶ್ ಫೋಗಟ್ ಪ್ಯಾರಿಸ್‌ನಿಂದ ಭಾರತಕ್ಕೆ ಹಿಂದಿರುಗಿದಾಗಿನಿಂದಲೂ ಅವರೊಂದಿಗೆ ಹೆಚ್ಚಾಗಿ ಕಾಂಗ್ರೆಸ್ ನಾಯಕರು ಕಾಣಿಸಿಕೊಂಡಿದ್ದಾರೆ. ಲೈಂಗಿಕ ಕಿರುಕುಳದ ಆರೋಪದ ಮೇಲೆ ಈ ಹಿಂದಿನ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಮತ್ತು ಬಿಜೆಪಿ ನಾಯಕ ಬ್ರಿಜ್‌ಭೂಷಣ್ ಶರಣ್ ಸಿಂಗ್ ವಿರುದ್ಧ ಹರಿಯಾಣದ ವಿನೇಶ್ ಮತ್ತು ಇತರ ಕುಸ್ತಿಪಟುಗಳು ನಡೆಸಿದ ಪ್ರತಿಭಟನೆಗೆ ದೀಪೇಂದರ್ ಹೂಡಾ ಕೂಡಾ ನಿರಂತರವಾಗಿ ಬೆಂಬಲ ನೀಡುತ್ತಾ ಬಂದಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!