Tuesday, November 24, 2026

ಪ್ರಾಯೋಗಿಕ ಆವೃತ್ತಿ

ಸಾಲು ಮರದ ತಿಮ್ಮಕ್ಕ ನಿಧನಕ್ಕೆ ರಜೆ ಘೋಷಿಸಲಾಗಿದೆಯೇ ?

ವೃಕ್ಷಮಾತೆ ಸಾಲು ಮರದ ತಿಮ್ಮಕ್ಕವರನ ನಿಧನದ ಹಿನ್ನೆಲೆಯಲ್ಲಿ ನ.15 ರಂದು ರಾಜ್ಯಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳಿಗೆ ರಾಜ್ಯ ಸರ್ಕಾರ ರಜೆ ಘೋಷಣೆ ಮಾಡಲಾಗಿದೆ ಎಂಬ ನಕಲಿ ಸುತ್ತೋಲೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಮೂಲಕ ಸಾಕಷ್ಟು ಗೊಂದಲ ಉಂಟು ಮಾಡಿದೆ.

ಆದರೆ ರಾಜ್ಯ ಸರ್ಕಾರ ಈ ಬಗ್ಗೆ ಯಾವುದೇ ಅಧಿಕೃತ ಆದೇಶ ಹೊರಡಿಸಿಲ್ಲ. ಅಲ್ಲದೇ ಸಾಲು ಮರದ ತಿಮ್ಮಕ್ಕ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೊಮನಹಳ್ಳಿ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ತಿಮ್ಮಕ್ಕ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ನಕಲಿ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ. ಇದು ಕೂಡ ಸತ್ಯಕ್ಕೆ ದೂರವಾದ ಮಾಹಿತಿಯಾಗಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಸ್ಷಷ್ಟಪಡಿಸಿದ್ದಾರೆ.

ಎಸ್.ಎಂ.ಕೃ‍ಷ್ಣ ಅವರ ನಿಧನದ ಸಂದರ್ಭದಲ್ಲಿ ಈ ಹಿಂದೆ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಮಾರ್ಪಡಿಸಿ ನಕಲಿ ಸುತ್ತೋಲೆಯನ್ನು ಸೃಷ್ಟಿಮಾಡಿರುವ ಸಾಧ್ಯತೆಗಳಿವೆ ತಿಳಿದು ಬಂದಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ