ಬೈರಾಗಿ ಸಿನಿಮಾದ ಪ್ರಚಾರ ಕಾರ್ಯಕ್ಕೆ ಬೆಂಗಳೂರಿನಿಂದ ಚಾಮರಾಜನಗರಕ್ಕೆ ತೆರಳುತ್ತಿದ್ದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಅಭಿಮಾನಿಗಳು ಅದ್ದೂರಿ ಸ್ವಾಗತ ಕೋರಿದರು.
ಮಂಡ್ಯ ನಗರದ ಸಂಜಯ ವೃತ್ತದಲ್ಲಿ ಜಮಾಯಿಸಿದ ನೂರಾರು ಸಂಖ್ಯೆಯಲ್ಲಿದ್ದ ಶಿವರಾಜ್ ಕುಮಾರ್ ಅವರಿಗೆ ಅಭಿಮಾನಿಗಳು ಕ್ರೇನ್ ಮೂಲಕ ಬೃಹತ್ ಹೂವಿನ ಹಾರವನ್ನು ಹಾಕಿ,ಪಟಾಕಿ ಸಿಡಿಸಿ ಅದ್ದೂರಿ ಸ್ವಾಗತ ನೀಡಿದರು.
ನಂತರ ಶಿವರಾಜ್ ಕುಮಾರ್ ಅವರು ಸಂಜಯ ವೃತ್ತದಲ್ಲಿ ಸ್ಥಾಪಿಸಲಾಗಿರುವ ತಮ್ಮ ತಂದೆ ಡಾ. ರಾಜಕುಮಾರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.
ಅಭಿಮಾನಿಗಳ ಅದ್ದೂರಿ ಸ್ವಾಗತಕ್ಕೆ ಖುಷಿಯಾದ ಶಿವರಾಜಕುಮಾರ್ ಅವರು ಅಭಿಮಾನಿಗಳ ಅಪೇಕ್ಷೆಯಂತೆ ಪ್ರಚಾರ ವಾಹನದ ಮೇಲೆ ನಿಂತು ನಾಲ್ಕಾರು ಸ್ಟೆಪ್ಪುಗಳನ್ನು ಹಾಕುತ್ತಿದ್ದಂತೆ ನೆರೆದಿದ್ದ ಅಭಿಮಾನಿಗಳು ಸಿಳ್ಳೆ ಹಾಕಿ, ಚಪ್ಪಾಳೆ ತಟ್ಟಿ ಹರ್ಷ ವ್ಯಕ್ತಪಡಿಸಿದರು.
ನಿಮ್ಮ ಪ್ರೀತಿ ಅಭಿಮಾನಕ್ಕೆ ನಾನು ಅಭಾರಿಯಾಗಿದ್ದೇನೆ ಬೈರಾಗಿ ಚಿತ್ರದ ಟ್ರೈಲರ್ ರಿಲೀಸ್ ನಾಳೆ ಚಾಮರಾಜನಗರದಲ್ಲಿ ನಡೆಯುತ್ತಿದೆ.ಚಿತ್ರ ಉತ್ತಮವಾಗಿ ಮೂಡಿಬಂದಿದ್ದು ಎಲ್ಲರೂ ಚಿತ್ರಮಂದಿರಕ್ಕೆ ತೆರಳಿ ವೀಕ್ಷಣೆ ಮಾಡಿ ಪ್ರೋತ್ಸಾಹಿಸಬೇಕೆಂದು ಕೋರಿದರು.