Tuesday, May 14, 2024

ಪ್ರಾಯೋಗಿಕ ಆವೃತ್ತಿ

ಕೇಸರಿ ಪಕ್ಷದೊಂದಿಗೆ ಜೆಡಿಎಸ್‌ ಪಕ್ಷವನ್ನು ವಿಲೀನಗೊಳಿಸುವುದಿಲ್ಲ: ಹೆಚ್.ಡಿ.ಕುಮಾರಸ್ವಾಮಿ

ಕೇಸರಿ ಪಕ್ಷದೊಂದಿಗೆ ಜೆಡಿಎಸ್‌ ಪಕ್ಷವನ್ನು ವಿಲೀನಗೊಳಿಸುವುದಿಲ್ಲ ಎಂದು ಜೆಡಿಎಸ್‌ ಪಕ್ಷವು ಕೇಂದ್ರದ ಬಿಜೆಪಿ ನಾಯಕತ್ವಕ್ಕೆ ಹೇಳಿದೆ.

ನಮ್ಮ ನಿಲುವಿನ ಬಗ್ಗೆ ನಮಗೆ ಸ್ಪಷ್ಟತೆ ಇದೆ. ಘನತೆಯ ಮೈತ್ರಿಗೆ ಮಾತ್ರ ನಾವು ಒಪ್ಪಿದ್ದೇವೆ. ನಮ್ಮ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಿಎಂ, ಜೆಡಿಎಸ್‌ ನಾಯಕ ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಮೂಲಗಳ ಪ್ರಕಾರ ಬಿಜೆಪಿಯ ಉನ್ನತ ನಾಯಕತ್ವ ರಾಜ್ಯದಲ್ಲಿ ಜೆಡಿಎಸ್‌ ಪಕ್ಷವನ್ನು ಬಿಜೆಪಿ ಜೊತೆ ವಿಲೀನಕ್ಕೆ ಪ್ರಸ್ತಾಪಿಸಿದ್ದಾರೆ. ಇದಕ್ಕೆ ಹೆಚ್‌ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರು ನಿರಾಕರಿಸಿದ್ದಾರೆ.

ಈ ಮೈತ್ರಿಯು ಸುದೀರ್ಘವಾದುದು ಮತ್ತು 2028ರ ವೇಳೆಗೆ ಮುಂದಿನ ರಾಜ್ಯ ವಿಧಾನಸಭಾ ಚುನಾವಣೆವರೆಗೂ ಮುಂದುವರಿಯಲಿದೆ. ಆದರೆ ಬಿಜೆಪಿ ಜೊತೆ ಜೆಡಿಎಸ್‌ ವಿಲೀನವಾಗುವುದಿಲ್ಲ ಅದು ಪ್ರಾದೇಶಿಕ ಪಕ್ಷವಾಗಿಯೇ ಇರಲಿದೆ ಎಂದು ಜೆಡಿಎಸ್‌ನ ಉನ್ನತ ಮೂಲಗಳು ತಿಳಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ ಜೆಡಿಎಸ್‌ ಶಾಸಕ ಶರಣಗೌಡ ಕಂದ್ಕೂರು, ಬಿಜೆಪಿ- ಜೆಡಿಎಸ್‌ ಮೈತ್ರಿಯಾದರೆ ನಾನು ಪಕ್ಷವನ್ನು ತೊರೆಯುವುದಿಲ್ಲ. ಕುಮಾರಸ್ವಾಮಿ ನನ್ನನ್ನು ಪಕ್ಷದಿಂದ ಹೊರ ಹಾಕಿದರೂ ಪಕ್ಷ ತೊರೆಯುವುದಿಲ್ಲ. ನಾನು ಹೇಳುವುದೇನೆಂದರೆ ಹಿರಿಯ ನಾಯಕರು ಮೈತ್ರಿ ನಿರ್ಧಾರವನ್ನು ತೆಗೆದುಕೊಳ್ಳುವ ಮೂಲಕ ಶಾಸಕರ ಜೊತೆ ಮಾತುಕತೆ ನಡೆಸಬೇಕಿದೆ ಎಂದು ಹೇಳಿದ್ದಾರೆ.

ಮೈತ್ರಿಯು ಪಕ್ಷದ ಮತಗಳ ಹಂಚಿಕೆಯ ಮೇಲೆ ಪರಿಣಾಮ ಬೀರಲಿದೆ. ಹೆಚ್ಚಿನ ಜೆಡಿಎಸ್‌ ಶಾಸಕರು ಬಿಜೆಪಿ ವಿರುದ್ಧ ಹೋರಾಟ ನಡೆಸಿ ಜೆಡಿಎಸ್‌ ಟಿಕೆಟ್‌ನಲ್ಲಿ ಗೆಲುವನ್ನು ಸಾಧಿಸಿದ್ದಾರೆ. ಲೋಕಸಭೆಯ ಚುನಾವಣೆಯ ಬಳಿಕ ಮೈತ್ರಿ ಮುಂದುವರಿದರೆ ಏನಾಗುತ್ತೆ? ಎಂದು ಪ್ರಶ್ನಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!