Wednesday, May 15, 2024

ಪ್ರಾಯೋಗಿಕ ಆವೃತ್ತಿ

ಯಾರು ಅಭ್ಯರ್ಥಿ ಆಗುತ್ತಾರೋ ಅವರ ಪರ ಕೆಲಸ ಮಾಡಿ : ದಳಪತಿಗಳಿಗೆ ಎಚ್.ಡಿ. ಕುಮಾರಸ್ವಾಮಿ ತಾಕೀತು

ನಿಮ್ಮ ಪಾಡಿಗೆ ನೀವು ಕೆಲಸ ಮಾಡಿ, ನಾನು ಯಾರ ಹೆಸರನ್ನು ಘೋಷಣೆ ಮಾಡುತ್ತೇನೋ ಅವರ ಪರವಾಗಿ ಕೆಲಸ ಮಾಡಿ, ಯಾವ ಕಾರಣಕ್ಕೂ ಮೈತ್ರಿ ಧರ್ಮ ಮೀರುವುದು ಬೇಡ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಜಿಲ್ಲೆಯ ದಳಪತಿಗಳಿಗೆ ತಿಳಿಸಿದರು.

ಮಂಡ್ಯ ನಾಯಕರ ಸಭೆ ನಡೆಸಿದ ಕುಮಾರಸ್ವಾಮಿ ಅವರು ಜಿಲ್ಲೆಯ ಬಿಜೆಪಿ ನಾಯಕರು, ರಾಜ್ಯ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿ ಆಯ್ಕೆ ಮಾಡುವುದಾಗಿ ಮುಖಂಡರಿಗೆ ತಿಳಿಸಿದರು.

ಬೆಂಗಳೂರಿನ ಜೆಪಿ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಮಂಡ್ಯ ಜಿಲ್ಲೆಯ ಜೆಡಿಎಸ್ ನಾಯಕರೊಂದಿಗೆ ಮಂಡ್ಯ ಲೋಕಸಭಾ ಕ್ಷೇತ್ರದ ಬಗ್ಗೆ ಸಮಾಲೋಚನೆ ನಡೆಸಿದರು.

ಮಂಡ್ಯ ಕ್ಷೇತ್ರಕ್ಕೆ ಜಿಲ್ಲೆಯ ಬಿಜೆಪಿ ನಾಯಕರು, ರಾಜ್ಯ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿ ಆಯ್ಕೆ ಮಾಡಲಾಗುವುದು ಎಂದು ನೇರ ಮಾತುಗಳಲ್ಲಿ ಜಿಲ್ಲಾ ನಾಯಕರಿಗೆ ಹೇಳಿದರು.

ಜಿಲ್ಲೆಯ ಸ್ಥಿತಿಗತಿಗಳನ್ನು ವಿಸ್ತೃತವಾಗಿ ಚರ್ಚೆ ನಡೆಸಿದ ಮಾಜಿ ಮುಖ್ಯಮಂತ್ರಿಗಳು, ಬಿಜೆಪಿ ಮೈತ್ರಿ ನಂತರದ ಜಿಲ್ಲೆಯಲ್ಲಿನ ರಾಜಕೀಯ ಪರಿಸ್ಥಿತಿಗಳ ಬಗ್ಗೆ ಅವಲೋಕನ ಮಾಡಿದರು.

ಜಿಲ್ಲೆಯ ಜಾ.ದಳ ನಾಯಕರು ನೀಡಿದ ಸಲಹೆ,ಸೂಚನೆಗಳನ್ನು ಆಲಿಸಿದ ಕುಮಾರಸ್ವಾಮಿ, ಮಂಡ್ಯ ಕ್ಷೇತ್ರದ
ಅಭ್ಯರ್ಥಿ ಆಯ್ಕೆ ಬಗ್ಗೆ ನಾಯಕರಿಂದ ಮಾಹಿತಿ ಸಂಗ್ರಹ ಮಾಡಿದರಲ್ಲದೆ; ಚುನಾವಣೆಯಲ್ಲಿ ಗೆಲುವು ಮುಖ್ಯ. ಮೈತ್ರಿ ಅಭ್ಯರ್ಥಿಯನ್ನು ನಾವು ಗೆಲ್ಲಿಸಿಕೊಳ್ಳಲೇಬೇಕು. ಹಿಂದಿನ ಘಟನೆಗಳಿಂದ ಪಾಠ ಕಲಿಯಬೇಕು ಹಾಗೂ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಮೈತ್ರಿ ಪಕ್ಷಕ್ಕೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಬೇಕು ಎಂದು ಸೂಚಿಸಿದರು.

ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ ಹಾಗೂ ಮಾಜಿ ಶಾಸಕರಾದ ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಡಾ.ಅನ್ನದಾನಿ, ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಜಿಲ್ಲಾಧ್ಯಕ್ಷ ರಮೇಶ್ ಅವರು ಈ ಸಭೆಯಲ್ಲಿ ಭಾಗವಹಿಸಿದ್ದರು.

Related Articles

1 COMMENT

  1. ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡ ಬಹುತೇಕ ಪ್ರಾದೇಶಿಕ ಪಕ್ಷಗಳು ತಮ್ಮ ಅಸ್ತಿತ್ವವನ್ನು ಕಳೆದುಕೊಂಡ ನಿದರ್ಶನಗಳು ಇವೆ,, ಕಾರಣವಿಷ್ಟೇ ಅವರಿಗೆ ರಾಜ್ಯದ ಹಿತಾಸಕ್ತಿಗಿಂತ ದಿಲ್ಲಿಯ ದರ್ಬಾರಿನ ಮತ್ತು ರಿಮೋಟ್ ಕಂಟ್ರೋಲ್ ಬಾಸ್ ನ ಹಿಡನ್ ಅಜೆಂಡಾ ಮುಖ್ಯ,,ಬಳಸಿ ಬಿಸಾಡುವರು, ಅಷ್ಟೊತ್ತಿಗೆ ಪ್ರಾದೇಶಿಕ ಪಕ್ಷ ರಾಜ್ಯದ ಜನರ ವಿಶ್ವಾಸ ಕಳೆದುಕೊಂಡು,, ಅಲ್ಲೂ ಇಲ್ಲ ಇಲ್ಲೂ ಇಲ್ಲ ಆಗುವ ಸಾಧ್ಯತೆಗಳು ಹೆಚ್ಚು,, ಕನ್ನಡಿಗರ ಮೊದಲ ಪ್ರಧಾನಿ ದೇವೇಗೌಡರ ಕೈಯಿಂದ ಸ್ಥಾಪನೆ ಆದ ಪಕ್ಷ ಉತ್ತರದ ಜುಮ್ಲಾ ವ್ಯಾಪಾರಿಗಳ ಕೈಯಲ್ಲಿ ಸಿಕ್ಕು ಮಾಯವಾಗಿಬಿಡಬಾರದು ಅನ್ನುವ ಕಳಕಳಿ ಅಷ್ಟೇ

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!