Sunday, November 22, 2026

ಪ್ರಾಯೋಗಿಕ ಆವೃತ್ತಿ

ಸಿಎಂ ಖುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಹೆಚ್.ಡಿ.ಕುಮಾರಸ್ವಾಮಿ

ಇಷ್ಟು ದಿನ ಹೊರಗೆ ಬಾರದ ಮುಡಾ ಹಗರಣ ಈಗ ಬಂದಿದ್ದು ಯಾಕೆ ? ಇದರ ಹಿಂದೆ ಸಿಎಂ ಖುರ್ಚಿ ಮೇಲೆ ಟವಲ್ ಹಾಕಿರುವವರ ಪಾತ್ರ ಇದೆ. ಸಿಡಿ ಫ್ಯಾಕ್ಟರಿ ಬಂದ್ ಆಯ್ತು ಮುಡಾ ಫ್ಯಾಕ್ಟರಿ ಶುರುವಾಯ್ತು ಎಂದು ಹೇಳಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ಪರೋಕ್ಷ ಆರೋಪ ಮಾಡಿದ್ದಾರೆ.

ಮೈಸೂರಿನ ಚಾಂಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ ಹಗರಣ ಎಂದು ಬಿಜೆಪಿಯವರು ಹೋರಾಟ ಮಾಡುತ್ತಿದ್ದಾರೆ. ಆದರೆ ಹಗರಣ ಆಚೆ ಬರಲು ಕಾಂಗ್ರೆಸ್‌ನವರೇ ಒಳಗೆ ಕುಮ್ಮಕ್ಕು ಕೊಡುತ್ತಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಇದೆ. ಸಿಎಂ ಪತ್ನಿಗೆ ಆ ಜಾಗ ಹೇಗೆ ಬಂತು ಅಂತಲೂ ನನಗೆ ಗೊತ್ತಿದೆ ಎಂದು ಅವರು ಹೇಳಿದರು.

62 ಕೋಟಿ ರೂ. ಪರಿಹಾರ ಕೇಳುವ ಸಿಎಂ ಭೂಮಿ ಕಳೆದುಕೊಂಡು ಬೀದಿಯಲ್ಲಿ ನಿಂತಿರುವ ರೈತರಿಗೂ ಪರಿಹಾರ ಕೊಡಿಸಲಿ ಎಂದು ತಿರುಗೇಟು ನೀಡಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ