Tuesday, November 24, 2026

ಪ್ರಾಯೋಗಿಕ ಆವೃತ್ತಿ

ಪರಿನಿರ್ವಾಣ ದಿನ | ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಹೆಚ್.ಡಿ.ಕುಮಾರಸ್ವಾಮಿ ಮಾಲಾರ್ಪಣೆ

ಭಾರತ ರತ್ನ, ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ 69ನೇ ಪರಿನಿರ್ವಾಣ ದಿನದ ಅಂಗವಾಗಿ ಮಂಡ್ಯ ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದ ಉದ್ಯಾನವನದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ರವರ ಪ್ರತಿಮೆಗೆ ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಹೆಚ್. ಡಿ ಕುಮಾರಸ್ವಾಮಿ ಅವರು ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಸಿಇಓ ಕೆ.ಆರ್ ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಶ್ರೀನಿವಾಸ್, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಕಾವ್ಯಶ್ರೀ, ಮಾಜಿ ಶಾಸಕರಾದ ಡಾ. ಅನ್ನದಾನಿ ಡಿ.ಸಿ.ತಮ್ಮಯ್ಯ ಪಿ.ಇ.ಟಿ ಸಂಸ್ಥೆಯ ಅಧ್ಯಕ್ಷರಾದ ಕೆ.ಎಸ್ ವಿಜಯಾನಂದ, ಸುರೇಶ್ ಗೌಡ, ನಗರಸಭಾ ಆಯುಕ್ತರಾದ ಯು.ಪಿ ಪಂಪಶ್ರೀ, ಸಣ್ಣ ಕೈಗಾರಿಕೆಗಳ ರಾಜ್ಯ ಉಪಾಧ್ಯಕ್ಷರಾದ ವಿಜಯಲಕ್ಷ್ಮಿ ರಘುನಂದನ್, ಮಾಜಿ ಶಾಸಕ ಕೆ.ಟಿ ಶ್ರೀಕಂಠೇಗೌಡ, ಜೆ.ಡಿ.ಎಸ್ ಪಕ್ಷದ ಜಿಲ್ಲಾಧ್ಯಕ್ಷ ಡಿ. ರಮೇಶ, ನಗರಸಭೆಯ ಮಾಜಿ ಅಧ್ಯಕ್ಷ ಕೆ.ನಾಗೇಶ್, ಮುಖಂಡರಾದ ಸುರೇಶ್, ಸಾತನೂರು ಜಯರಾಂ, ಪುಟ್ಟಸ್ವಾಮಿ, ನವೀನ್, ಹೆಚ್. ಎಂ ಬಸವರಾಜು ಪದ್ಮಾವತಿ, ವಿಜಯಕುಮಾರ್ ನಿರ್ಮಲ, ಸುಷ್ಮಾ ಸೇರಿದಂತೆ ಇನ್ನಿತರರು ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ