Sunday, May 5, 2024

ಪ್ರಾಯೋಗಿಕ ಆವೃತ್ತಿ

ವಕೀಲರೊಂದಿಗೆ ಹೆಚ್.ಡಿ ಕುಮಾರಸ್ವಾಮಿ ಸಭೆ: ಬೆಂಬಲಿಸಲು ಮನವಿ

ಮಂಡ್ಯ ಲೋಕಸಭಾ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯ ನಗರದ ವಕೀಲರ ಸಂಘದಲ್ಲಿ ವಕೀಲರ ಜೊತೆ ಸಭೆ ನೆಡೆಸಿದರು.

ಏಪ್ರಿಲ್ 26ರಂದು ನಡೆಯುವ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸುವಂತೆ ವಕೀಲರಲ್ಲಿ ಮನವಿ ಮಾಡಿ ಮಾತನಾಡಿದ ಅವರು ನನ್ನ ಮೇಲೆ ನಂಬಿಕೆ ವಿಶ್ವಾಸವಿಡಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನನ್ನದೇ ಆದ ಯೋಜನೆಗಳನ್ನು ರೂಪಿಸಿದ್ದೇನೆ ಎಂದು ಹೇಳಿದರು.

ಜನಪ್ರತಿನಿಧಿಯಾಗಿ ಆಯ್ಕೆಯಾದರೆ ಪ್ರಾಮಾಣಿಕವಾಗಿ ಯಾವುದೇ ರಾಜಕೀಯ ನಡೆಸದೆ ಜನಸಾಮಾನ್ಯರ ಕೆಲಸಗಳನ್ನು ಬಗೆಹರಿಸಲು,ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಲು ಕೆಲಸ ಮಾಡುತ್ತೇನೆ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ತಿಳಿಸಿದರು.

ವಿಶೇಷವಾಗಿ ರಾಜ್ಯದ ನೀರಾವರಿ ಯೋಜನೆಯ ಸಮಸ್ಯೆಗಳನ್ನು ಸರಿಪಡಿಸುವ ಅವಕಾಶಗಳಿದ್ದು, ದೇವೇಗೌಡರೊಂದಿಗೆ ಪ್ರಧಾನಿ ಮೋದಿಯವರು ಗೌರವಯುತವಾಗಿ ಇದ್ದಾರೆ,ನನ್ನ ಮೇಲೆಯೂ ಸಹ ಪ್ರಧಾನಿ ಮೋದಿಯವರು ನಂಬಿಕೆ ವಿಶ್ವಾಸ ಇಟ್ಟಿದ್ದಾರೆ ಈ ನಿಟ್ಟಿನಲ್ಲಿ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಕಾನೂನು ಘಟಕದ ರಾಜ್ಯ ಉಪಾಧ್ಯಕ್ಷ ಕೆ.ಎಂ.ಬಸವರಾಜು, ವಕೀಲರ ಸಂಘದ ಅಧ್ಯಕ್ಷ ರಾಜೇಂದ್ರ, ಕಾರ್ಯದರ್ಶಿ ಸಿದ್ದರಾಜು, ಖಜಾಂಚಿ ಮಹೇಶ್ ಸೇರಿದಂತೆ ಇತರರು ಹಾಜರಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!