ಕೇಂದ್ರ ಸರ್ಕಾರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾಗಿ ಕಳೆದ ಜೂ.9ರಂದು ಪ್ರಮಾಣ ವಚನ ಸ್ವೀಕರಿಸಿದ ಮಂಡ್ಯ ಸಂಸದ ಹೆಚ್.ಡಿ.ಕುಮಾರಸ್ವಾಮಿ ಅವರು ಬುಧವಾರ (ಜೂ.12) ಕರ್ನಾಟಕಕ್ಕೆ ಸಂಬಂಧಿಸಿದ ಮೊದಲ ಕಡತಕ್ಕೆ ಸಹಿ ಹಾಕಿದ್ದಾರೆ.

ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಕಡತಕ್ಕೆ ಸಹಿ ಹಾಕಿದೆ. ಅದು ಕರ್ನಾಟಕಕ್ಕೆ ಸಂಬಂಧಿಸಿದ ಕಡತ ಎನ್ನುವುದು ವಿಶೇಷ, ಇದು ನನ್ನ ತವರು ಕರ್ನಾಟಕಕ್ಕೆ ಸಂಬಂಧಿಸಿದ್ದು ಎಂದು ಅವರು ‘ಎಕ್ಸ್’ನಲ್ಲಿ ಬರೆದುಕೊಂಡಿದ್ದಾರೆ.
ರಾಜ್ಯದ ದೇವದಾರಿ ಕಬ್ಬಿಣದ ಅದಿರು ಗಣಿ ಕಾರ್ಯಾಚರಣೆಗಾಗಿ KIOCL ಲಿಮಿಟೆಡ್ನ ಮೊದಲ ಕಡತಕ್ಕೆ ಸಹಿ ಹಾಕಲಾಯಿತು. ಈ ಸಂದರ್ಭದಲ್ಲಿ ಉಕ್ಕು ಸಚಿವಾಲಯದ ಕಾರ್ಯದರ್ಶಿ ನಾಗೇಂದ್ರ ನಾಥ್ ಸಿನ್ಹಾ ಸೇರಿದಂತೆ ಉಪಸ್ಥಿತರಿದ್ದರು.




