Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಭರ್ಜರಿ ಗೆಲುವು

ದೇಶದ ಗಮನ ಸೆಳೆದಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಭಾರೀ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ ಅವರು ಎರಡೂವರೆ ಲಕ್ಷಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ನ ಸ್ಟಾರ್ ಚಂದ್ರು ಸೋಲು ಅನುಭವಿಸಿದ್ದಾರೆ.

ಕುಮಾರಸ್ವಾಮಿ ಸ್ಪರ್ಧೆಯಿಂದಾಗಿ ಮಂಡ್ಯ ಕ್ಷೇತ್ರವು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿತ್ತು, ಹಾಗಾಗಿ ಜೆಡಿಎಸ್- ಕಾಂಗ್ರೆಸ್ ಎರಡೂ ಪಕ್ಷಗಳಿಗೂ ಪ್ರತಿಷ್ಠೆಯ ಕಣವಾಗಿತ್ತು. ಮಂಡ್ಯ ಉಸ್ತುವಾರಿ ಸಚಿವರಾಗಿ ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ನಡೆದರೂ ,ಅಲ್ಲದೇ  ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 7 ಜನ ಕಾಂಗ್ರೆಸ್ ಶಾಸಕರಿದ್ದರೂ ಕೂಡ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳುವಲ್ಲಿ ಕಾಂಗ್ರೆಸ್ ನಾಯಕರು ವಿಫಲರಾಗಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!