Thursday, June 13, 2024

ಪ್ರಾಯೋಗಿಕ ಆವೃತ್ತಿ

ಗ್ಯಾರಂಟಿ ಯೋಜನೆಯಿಂದ ಹಳ್ಳಿಯ ಹೆಣ್ಮಕ್ಕಳು ದಾರಿ ತಪ್ಪಿದ್ದಾರೆ: HDK ವಿವಾದಾತ್ಮಕ ಹೇಳಿಕೆ

“ಕಾಂಗ್ರೆಸ್​ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ಹೆಣ್ಣು ಮಕ್ಕಳು ದಾರಿತಪ್ಪಿದ್ದಾರೆ” ಎಂದು ಹೇಳಿಕೆ ನೀಡುವ ಮೂಲಕ ಮಾಜಿ ಸಿಎಂ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ವಿವಾದಕ್ಕೆ ನಾಂದಿ ಹಾಡಿದ್ದಾರೆ.

ತುಮಕೂರಿನ ತುರುವೇಕೆರೆಯಲ್ಲಿ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಪರ ಕುಮಾರಸ್ವಾಮಿ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ತಮ್ಮ ಭಾಷಣದಲ್ಲಿ ಗ್ಯಾರಂಟಿ ಯೋಜನೆ ಬಗ್ಗೆ ಟೀಕಿಸುವ ನೀಡುವ ಭರದಲ್ಲಿ ಹಳ್ಳಿಯ ಹೆಣ್ಣು ಮಕ್ಕಳ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ.

“ಉಚಿತ ಗ್ಯಾರಂಟಿ ಯೋಜನೆ ಕೊಡಲು ಯಾವ ಜೇಬಿಗೆ ಕೈ ಹಾಕಿದ್ದಾರೆ” ಎಂದು ಹೇಳುತ್ತಾ ಈ ರೀತಿಯ ಎಡವಟ್ಟು ಮಾಡಿಕೊಂಡಿದ್ದಾರೆ. ಸ್ವಲ್ಪ ಗಮನ ಇಟ್ಟು ಎರಡು ಮಾತುಗಳನ್ನ ಕೇಳಬೇಕು. ಇವತ್ತಿನ ಕಾಂಗ್ರೆಸ್ ಸರ್ಕಾರ ಕಳೆದ ಚುನಾವಣೆಯಲ್ಲಿ ಐದು ಗ್ಯಾರಂಟಿ ಘೋಷಣೆ ಮಾಡಿದ್ದರಿಂದ ನನ್ನ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪಿದ್ದಾರೆ” ಎಂದು ಹೇಳಿಕೆ ನೀಡಿದ್ದಾರೆ.

“ಈ ರೀತಿ ಉಚಿತ ಯೋಜನೆ ಕೊಟ್ಟರೆ ಹಳ್ಳಿಯ ತಾಯಂದಿರ ಬದುಕು ಏನಾಗಬೇಕು? ಈ ಬಗ್ಗೆ ಎಲ್ಲರೂ ಯೋಚನೆ ಮಾಡಬೇಕಿದೆ. ನಿಮ್ಮ ಕುಟುಂಬದ ಬದುಕೇನಾಗಬೇಕು ಯೋಚನೆ ಮಾಡಬೇಕಿದೆ. ಅವರಿಗೆ ಐದು ಉಚಿತ ಗ್ಯಾರಂಟಿ ಬಿಟ್ಟು ಬೇರೆ ಏನೂ ಇಲ್ಲ” ಎನ್ನುತ್ತಲೇ ಗ್ಯಾರಂಟಿಗಳನ್ನು ಕುಮಾರಸ್ವಾಮಿ ಟೀಕಿಸಿದ್ದಾರೆ.

“>

“ಬೆಳಗ್ಗೆ ಎದ್ದು ಯಾವ ಪತ್ರಿಕೆ ನೋಡಿದರೂ ಗ್ಯಾರಂಟಿಯದ್ದೇ ಜಾಹೀರಾತು. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ಫೋಟೋಗಳನ್ನು ಹಾಕಿಕೊಂಡು, ಈಗಾಗಲೇ ₹300 ಕೋಟಿಯಷ್ಟು ಹಣವನ್ನು ಜಾಹೀರಾತಿಗಾಗಿ ಖರ್ಚು ಮಾಡಿದ್ದಾರೆ. ಅದೆಲ್ಲವೂ ನಿಮ್ಮ ದುಡ್ಡು. ಈ ಹಣ ಕಾಂಗ್ರೆಸ್ ಕಚೇರಿಯಿಂದಲೋ ಅಥವಾ ಅವರ ಜೇಬಿನಿಂದ ಹಾಕಿರುವ ದುಡ್ಡಲ್ಲ. ರೈತರು ಬೆಳೆ ನಷ್ಟ ಅನುಭವಿಸುತ್ತಿದ್ದರೂ ಕೇಂದ್ರ ಸರ್ಕಾರ ದುಡ್ಡು ಕೊಟ್ಟಿಲ್ಲ ಎಂದು ದೂರುತ್ತಿದ್ದಾರೆ” ಎಂದು ಬರ ಪರಿಹಾರ ಬಿಡುಗಡೆ ಮಾಡದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ ಮೋದಿ ಸರ್ಕಾರದ ನಡೆಯನ್ನು ಮಾಜಿ ಸಿಎಂ, ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಸಮರ್ಥಿಸಿಕೊಂಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!