Sunday, November 22, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ ಸೇರಿದಂತೆ ರಾಜ್ಯದ ಹೆದ್ದಾರಿ ಯೋಜನೆಗಳ ಕುರಿತು ಹೆಚ್.ಡಿ.ಕೆ – ಗಡ್ಕರಿ ಚರ್ಚೆ

ಮಂಡ್ಯ ಲೋಕಸಭೆ ಕ್ಷೇತ್ರದ ಹಾಲಿ ಹಾಗೂ ಮುಂದೆ ಕೈಗೊಳ್ಳಲಿರುವ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಹೆದ್ದಾರಿ ಮತ್ತು ಭೂಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಕೇಂದ್ರ ಸಚಿವರಾದ ಗಡ್ಕರಿ ಅವರ ನಿವಾಸಕ್ಕೆ ತಮ್ಮ ಆಪ್ತ ಅಧಿಕಾರಿಗಳ ಜತೆ ತೆರಳಿ ಭೇಟಿ ಮಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ಈಗಾಗಲೇ ಮಂಡ್ಯ ಜಿಲ್ಲೆಯಲ್ಲಿ ಕಾರ್ಯಗತ ಆಗುತ್ತಿರುವ ಹೆದ್ದಾರಿ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದರು.

ಈಗಾಗಲೇ ಹಲವಾರು ಯೋಜನೆಗಳ ಬಗ್ಗೆ ಮನವಿ ಮಾಡಿದ್ದು, ಬಹುತೇಕ ಯೋಜನೆಗಳಿಗೆ ಹೆದ್ದಾರಿ ಸಚಿವರಿಂದ ಅನುಮೋದನೆ ದೊರೆತಿದೆ. ಉಳಿದ ಕೆಲವು ಯೋಜನೆಗಳ ಬಗ್ಗೆ ಸಚಿವರು ಹೆದ್ದಾರಿ ಸಚಿವರೊಂದಿಗೆ ಚರ್ಚಿಸಿದರು.

ಇದೇ ವೇಳೆ ಪಾಂಡವಪುರ ಸಕ್ಕರೆ ಕಾರ್ಖಾನೆ ಸಮೀಪದ ಸಿಡಿಎಸ್ ಕಾಲುವೆಯಿಂದ ದರ್ಶಗುಪ್ಪೆ ನೀರು ಸಂಸ್ಕರಣ ಘಟಕದವರೆಗೂ ನಾಲ್ಕು ಪಥದ ಹೆದ್ದಾರಿಯ ಅಭಿವೃದ್ಧಿಗೆ ಅಗತ್ಯವಿರುವ ಹೆಚ್ಚುವರಿ ಅನುದಾನಕ್ಕೆ ನಿತಿನ್ ಗಡ್ಕರಿ ಅವರು ಅನುಮೋದನೆ ನೀಡಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ