Friday, June 21, 2024

ಪ್ರಾಯೋಗಿಕ ಆವೃತ್ತಿ

ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ HDK ದಾರಿತಪ್ಪಿದ ಮಗ: ಪ್ರಕಾಶ್ ರೈ

ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಹಾಗೂ ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ದಾರಿ ತಪ್ಪಿದ ಮಗ ಎಂದು ಖ್ಯಾತ ಚಿತ್ರನಟ ಪ್ರಕಾಶ್ ರೈ ಮೂದಲಿಸಿದರು.

ಮಂಡ್ಯನಗರದ ರೈತ ಸಭಾಂಗಣದಲ್ಲಿ ಮಂಡ್ಯ ಜಿಲ್ಲಾ ಶ್ರಮಿಕನಗರ ನಿವಾಸಿಗಳ ಒಕ್ಕೂಟದ ವತಿಯಿಂದ ನಡೆದ ಶ್ರಮಿಕರ ಸ್ವಾಭಿಮಾನಿ ಗೆಲುವಿನ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹೆಣ್ಣುಮಕ್ಕಳ ಬಗ್ಗೆ ಇಷ್ಟು ಕೆಳಮಟ್ಟಕ್ಕೆ ಇಳಿದು ಮಾತನಾಡಲು ಇವರಿಗೆ ನಾಚಿಕೆ, ಮಾನ ಮರ್ಯಾದೆ ಇಲ್ಲವೇ ? ಎಂದು ಪ್ರಶ್ನಿಸಿದರು.

ಕಳೆದ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರನ್ನು ‘ಗಂಡ ಸತ್ತ ಮುಂಡೆ’ ಎಂದು ಕರೆದಿದ್ದಕ್ಕೆ, ಮಂಡ್ಯ ಜಿಲ್ಲೆಯ ಮಹಿಳೆಯರು ಚುನಾವಣೆಯಲ್ಲಿ ಸೋಲಿಸಿ ಮನೆಗೆ ಕಳಿಸಿದ್ದರು. ಈ ಬಾರಿಯ ಚುನಾವಣೆಯಲ್ಲೂ ಅಂತದ್ದೆ ಕೆಲಸವನ್ನು ಕುಮಾರಸ್ವಾಮಿ ಮಾಡುತ್ತಿದ್ದಾರೆ. ಈಗ ಮಹಿಳೆಯರು ಎಚ್ಚೆತ್ತುಕೊಳ್ಳಬೇಕು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸರಿಯಾದ ಮಗ ಯಾರು, ಕಳ್ಳನನ್ನ ಮಗ ಯಾರು ಎಂದು ಮಂಡ್ಯದ ಜನತೆ ನಿರ್ಧಸುತ್ತಾರೆ ಎಂದರು.

ದಿಲ್ಲಿಯ ಮಹಾಪ್ರಭು ಮೈಸೂರಿಗೆ ಬಂದಿದ್ದಾರೆ

ಲೋಕಸಭಾ ಚುನಾವಣೆ ಬಂದಿರುವುದರಿಂದ ಮೈಸೂರಿನ ಮಹಾರಾಜರನ್ನು ನೋಡಲು ದಿಲ್ಲಿಯ ಮಹಾಪ್ರಭುಗಳು ಬಂದಿದ್ಧಾರೆ, ಇದರಿಂದಾಗಿ ಮಹಾಪ್ರಭುವಿನ ಕಾರ್ಯಕ್ರಮಕ್ಕೆ ಜನರನ್ನು ಕರೆದುಕೊಂಡು ಬಸ್ಸುಗಳು ಹೊರಟಿವೆ, ಇದರಿಂದ ಬೆಂಗಳೂರು-ಮೈಸೂರು ಹೈವೇ ನಲ್ಲಿ ಟ್ರಾಫಿಕ್ ಜಾಮ್ ಆಗಿದೆ. ನಮ್ಮ ಮಹಾಪ್ರಭುಗಳು ಕೋವಿಡ್ ಕಾಲದಲ್ಲಿ ಯಾಕೆ ಬರಲಿಲ್ಲ ಎಂದು ಮೋದಿಯವರನ್ನು ಪ್ರಶ್ನಿಸಿದರು.

ಬರ ಪರಿಹಾರ ನೀಡದ ಕೇಂದ್ರ

ಕಳೆದ ಸೆಪ್ಟಂಬರ್ ನಲ್ಲಿ ಬರ ಪರಿಹಾರ ನೀಡಿ ಎಂದು ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ಆದರೆ ಏಪ್ರಿಲ್ ಬಂದರೂ ಬರ ಪರಿಹಾರ ನೀಡಲಿಲ್ಲ, ಇದರಿಂದ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ ಹೋಗಿದೆ, ಇದರ ವಿಚಾರಣೆ ನಡೆಸಿದ ನ್ಯಾಯಾಲಯವು ಕೇಂದ್ರ ನೋಟೀಸ್ ನೀಡಲು ಮುಂದಾದಾಗ, ನೋಟೀಸ್ ನೀಡಬೇಡಿ ಮಾನ ಮರ್ಯಾದೆ ಹೋಗುತ್ತೇ ಎಂದು ಬೇಡಿಕೊಳ್ಳುತ್ತಿದ್ದಾರೆ. ಇಷ್ಟೆಲ್ಲ ನಾಟಕ ಯಾಕೆ ? ಎಂದು ಛೇಡಿಸಿದರು.

ಪ್ರಗತಿಪರ ಚಿಂತಕ ಡಾ.ವಾಸು ಹಾಗೂ ಭೂಮಿ ಮತ್ತು ವಸತಿ ಹಕ್ಕುಗಳ ವಂಚಿತರ ಹೋರಾಟ ಸಮಿತಿ ರಾಜ್ಯ ಕಾರ್ಯರ್ಶಿ ಕುಮಾರ್ ಸಮತಳ ವಿಚಾರ ಮಂಡನೆ ಮಾಡಿದರು. ಸಿರಿಮನೆ ನಾಗರಾಜು, ಪ್ರಗತಿಪರ ವಕೀಲ ಬಿ.ಟಿ.ವಿಶ್ವನಾಥ್ ಅಧ್ಯಕತೆ ವಹಿಸಿದ್ದರು. ವೇದಿಕೆಯಲ್ಲಿ ಕರ್ನಾಟಕ ಜನಶಕ್ತಿ ಸಂಘಟನೆ ಜಿಲ್ಲಾಧ್ಯಕ್ಷ ಕೃಷ್ಣ ಪ್ರಕಾಶ್, ಸಿಐಟಿಯು ಮುಖಂಡರಾದ ಸಿ.ಕುಮಾರಿ, ಪತ್ರಕರ್ತ ಎನ್.ನಾಗೇಶ್, ರೈತಸಂಘದ ಲತಾ ಶಂಕರ್, ಕರ್ನಾಟಕ ಜನಶಕ್ತಿಯ ಸಿದ್ದರಾಜು, ಪೂರ್ಣಿಮ, ಜಗದೀಶ್ ನಗರಕರೆ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!