Friday, November 20, 2026

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣ| ನಿಮಿಷಾಂಭ ದೇವಾಲಯದಲ್ಲಿ HDK ವಿಶೇಷ ಪೂಜೆ

ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಲಿರುವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸಕ್ಕರೆ ಜಿಲ್ಲೆ ಮಂಡ್ಯ ಜಿಲ್ಲೆಗೆ ಒಟ್ಟಾಗಿ ಭೇಟಿ ನೀಡುವ ಮೂಲಕ ಮೈತ್ರಿ ಕಹಳೆ ಮೊಳಗಿಸಿದ್ದಾರೆ.

ಉಭಯ ಪಕ್ಷಗಳ ನಾಯಕರ ಸಮನ್ವಯ ಸಭೆಯಿಂದ ಮಂಡ್ಯ ಲೋಕಸಭಾ ಕಣ ರಂಗೇರಿದೆ. ಇಂದು ಬೆಳಿಗ್ಗೆ ಜಿಲ್ಲೆಯ ಶ್ರೀರಂಗಪಟ್ಟಣದ ಗಂಜಾಂನಲ್ಲಿರುವ ಶಕ್ತಿ ದೇವತೆ ಶ್ರೀ ನಿಮಿಷಾಂಬ ದೇವಾಲಯಕ್ಕೆ ತೆರಳಿದ ಕುಮಾರಸ್ವಾಮಿ ಅವರು ಕುಟುಂಬಸ್ಥರು ಹಾಗೂ ತಮ್ಮ ಹೆಸರಿನಲ್ಲಿ ಅರ್ಚನೆ ನೆರವೇರಿಸಿ ಪೂಜೆ ಸಲ್ಲಿಸಿದರು.

ಈ ವೇಳೆ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್ ಮತ್ತಿತರರು ಉಪಸ್ಥಿತರಿದ್ದರು. ದೇವಾಲಯ ಪ್ರಾಂಗಣದಲ್ಲಿ ಸರಳ ವಿವಾಹ ಬಂಧನಕ್ಕೊಳಗಾಗಿದ್ದ ನಗುವಿನಹಳ್ಳಿಯ ನೂತನ ದಂಪತಿಗಳಿಗೆ ಗಣ್ಯರು ಶುಭ ಹಾರೈಸಿದರು.

ನಂತರ ಮಂಡ್ಯನಗರದ ಖಾಸಗಿ ಹೋಟೇಲ್ ನಲ್ಲಿ ನಡೆದ ಮೈತ್ರಿ ಪಕ್ಷಗಳ ಸಮನ್ವಯ ಸಭೆಯಲ್ಲಿ ಪಾಲ್ಗೊಂಡರು. ಹೋಟೇಲ್ ಆವರಣದಲ್ಲಿ ಜಮಾಯಿಸಿದ್ದ ಉಭಯ ಪಕ್ಷಗಳ ನೂರಾರು ಕಾರ್ಯಕರ್ತರು ಕುಮಾರಸ್ವಾಮಿ ಹಾಗೂ ವಿಜಯೇಂದ್ರ ಅವರಿಗೆ ಜೈಕಾರ ಹಾಕಿ ಸಂಭ್ರಮಿಸಿದರು. ಈ ಮೂಲಕ ಆಡಳಿತರೂಢ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಪ್ರಬಲ ಪೈಪೋಟಿ ನೀಡಲು ಮೈತ್ರಿ ನಾಯಕರು ಅಂಕಿತ ಹಾಕಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ