Thursday, September 19, 2024

ಪ್ರಾಯೋಗಿಕ ಆವೃತ್ತಿ

ಆರೋಗ್ಯ ಮತ್ತು ಪೌಷ್ಟಿಕ ಸಮೀಕ್ಷೆಗೆ ಚಾಲನೆ

ಶ್ರೀರಂಗಪಟ್ಟಣದಲ್ಲಿ ಪ್ರಾಯೋಗಿಕವಾಗಿ ಆರೋಗ್ಯ ಮತ್ತು ಪೌಷ್ಟಿಕ ಸಮೀಕ್ಷೆಗೆ ಮಂಡ್ಯ ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ಅನಿಲ್ ಕುಮಾರ್ ಚಾಲನೆ ನೀಡಿದರು.

ರಾಜ್ಯದಲ್ಲಿ ಪ್ರಾಯೋಗಿಕ ಯೋಜನೆಗಾಗಿ ಆಯ್ಕೆಯಾಗಿರುವ ಶ್ರೀರಂಗಪಟ್ಟಣ ತಾಲೂಕಿನಲ್ಲಿ ಆರೋಗ್ಯ ಮತ್ತು ಪೌಷ್ಟಿಕ ಸಮೀಕ್ಷೆ (ಇ- ಸಮೀಕ್ಷೆ )ಗೆ ಶ್ರೀರಂಗಪಟ್ಟಣದ ಗಂಜಾಂನಲ್ಲಿ ಚಾಲನೆ ನೀಡಲಾಯಿತು.

ಮೊಬೈಲ್ ಆಪ್ ಮೂಲಕ ನಡೆಸುವ ಸಮೀಕ್ಷೆಯು ಇಡೀ ರಾಜ್ಯದಲ್ಲಿ ಅನುಷ್ಠಾನಗೊಳ್ಳಲಿದ್ದು, ಈಗ ಪ್ರಾಯೋಗಿಕವಾಗಿ ಶ್ರೀರಂಗಪಟ್ಟಣ ತಾಲೂಕಿನಲ್ಲಿ ಸಮೀಕ್ಷೆ ನಡೆಸಲು ರಾಜ್ಯವಲಯದಿಂದ ಆಯ್ಕೆಯಾಗಿರುವುದು ಸಂತೋಷದ ವಿಚಾರ ಎಂದು ಅನಿಲ್ ಕುಮಾರ್ ಹೇಳಿದರು.

ಈ ಸಮೀಕ್ಷೆಯಿಂದ ಆರೋಗ್ಯ ಹಾಗೂ ಪೌಷ್ಟಿಕ ಕ್ಷೇತ್ರದಲ್ಲಿ ಸರ್ಕಾರದ ವತಿಯಿಂದ ರೂಪಿಸುವ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಂಟಿಯಾಗಿ ಮನೆ ಮನೆ ಭೇಟಿಯ ಮೂಲಕ ನಡೆಸುವ ಈ ಸಮೀಕ್ಷೆಯ ಸಂದರ್ಭದಲ್ಲಿ ಸಾರ್ವಜನಿಕರು ಬಿಪಿಎಲ್ ಕಾರ್ಡ್ ಅನ್ನು ಹಾಜರುಪಡಿಸಿ, ಸೂಕ್ತ ಮಾಹಿತಿಗಳನ್ನು ಹಂಚಿಕೊಳ್ಳಬೇಕು ಎಂದು ಮನವಿ ಮಾಡಿದರು.

ತಾಲೂಕು ಆರೋಗ್ಯ ಅಧಿಕಾರಿ ಡಾ.ಎನ್ ಕೆ ವೆಂಕಟೇಶ್ ಮಾರ್ಗದರ್ಶನದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಡಿ ಬೆನ್ನೂರ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ ಮೋಹನ, ನಗರ ದತ್ತಾಂಶ ವ್ಯವಸ್ಥಾಪಕ ಮನು, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಎಂ ಮಹದೇವಮ್ಮ, ಕ್ಷೇತ್ರ ಕಾರ್ಯಕ್ರಮ ವ್ಯವಸ್ಥಾಪಕ ಅಭಿನಂದನ್, ಆಶಾ ಕಾರ್ಯಕರ್ತೆ ಹೇಮಾವತಿ ಪಾಲ್ಗೊಂಡಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!