₹108.36 ಕೋಟಿ ವೆಚ್ಚದಲ್ಲಿ 254 ನಗರ ಆರೋಗ್ಯ ಕ್ಷೇಮ ಕೇಂದ್ರಗಳಲ್ಲಿ ಹಾಗೂ 39 ಕೆಎಸ್ಆರ್ಟಿಸಿ ಬಸ್ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್ಗಳ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ.
2024-25ನೇ ಸಾಲಿನಲ್ಲಿ ಕಾರ್ಯಕ್ರಮಗಳಡಿ 15 ವಿವಿಧ ಹಣಕಾಸು ಆಯೋಗದ ಅನುದಾನದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ರೋಗ ಪತ್ತೆ ಮೂಲ ಸೌಕರ್ಯಗಳನ್ನು ಒದಗಿಸಲು ರೂ. 145.99 ಕೋಟಿಗಳಲ್ಲಿ ಉಪಕರಣಗಳನ್ನು ಖರೀದಿಸಲು ಹಾಗೂ ರೂ. 84.88 ಕೋಟಿಗಳ ಅಂದಾಜು ಮೊತ್ತದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಗರ ಆರೋಗ್ಯ ಕ್ಷೇಮ ಕೇಂದ್ರ – ನಮ್ಮ ಕ್ಲಿನಿಕ್ ಗಳಲ್ಲಿನ ಪ್ರಯೋಗಾಲಯಗಳನ್ನು ಮತ್ತು ಆರೋಗ್ಯ ಸೇವೆಗಳನ್ನು ಬಲಪಡಿಸಲು ಉಪಕರಣಗಳನ್ನು ಖರೀದಿಸಲು ಅನುಮೋದನೆ ನೀಡಲಾಗಿದೆ.
5 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲು ಮತ್ತು ರೂ. 72.96 ಕೋಟಿಗಳ ಅಂದಾಜು ಮೊತ್ತದಲ್ಲಿ ನಮ್ಮ ಕ್ಲಿನಿಕ್ಗಳಿಗೆ ಅಗತ್ಯವಿರುವ ಔಷಧಿ ಮತ್ತು ರಾಸಾಯನಿಕಗಳನ್ನು PM- ABHIM ಅನುದಾನದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.




