ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿಯು ಡಿ.ಆರ್.ಎಂ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದಲ್ಲಿ ಮಂಡ್ಯ ನಗರದಲ್ಲಿ ಸೆ.17ರಂದು ಯೋಗಪಟುಗಳಿಗೆ ಉಚಿತವಾಗಿ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿದೆ.
ಮಂಡ್ಯ ನಗರದ ನೂರಡಿ ರಸ್ತೆಯಲ್ಲಿನ ಡಿ.ಆರ್.ಎಂ. ಆಸ್ಪತ್ರೆಯಲ್ಲಿ ಅಂದು ಬೆಳಗ್ಗೆ 7.30ಕ್ಕೆ ಶಿಬಿರ ಆರಂಭಗೊಳ್ಳಲಿದೆ. ಶಿಬಿರದಲ್ಲಿ ಉಚಿತವಾಗಿ ಇಸಿಜಿ, ಎಕೋ, ಬಿಪಿ, ಶುಗರ್, ಹಿಮೋಗ್ಲೋಬಿನ್, ಕ್ರಿಯಾಟಿನ್ ಟೆಸ್ಟ್ ಗಳನ್ನು ಮಾಡಲಾಗುತ್ತದೆ ಎಂದು ಸಮಿತಿಯ ಯೋಗ ಶಿಕ್ಷಕ ಕೆ.ಎಸ್. ನಂಜುಂಡಗುಪ್ತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜನರಲ್ ಫಿಜಿಷಿಯನ್, ಮೂಳೆ, ಹೃದ್ರೋಗ ತಜ್ಞರು ಶಿಬಿರದಲ್ಲಿ ಭಾಗವಹಿಸಿ ತಪಾಸಣೆ ಮಾಡುವರು ಎಂದಿದ್ದಾರೆ.




