ಮಳವಳ್ಳಿ ಪಟ್ಟಣದಲ್ಲಿ ನಡೆದ ತಾಲ್ಲೂಕು ಮಟ್ಟದ ಆರೋಗ್ಯ ಮೇಳ ಹಾಗೂ ಆರೋಗ್ಯ ಕಾರ್ಯಕ್ರಮಗಳ ಜಾಗೃತಿ ಅಭಿಯಾನದಲ್ಲಿ 6000ಕ್ಕೂ ಹೆಚ್ಚು ಮಂದಿ ಆರೋಗ್ಯ ತಪಾಸಣೆ ಮಾಡಿಸಿ ಕೊಂಡರು.
ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ಆರೋಗ್ಯ ಮೇಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸರ್ಕಾರ ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಮೊದಲ ಬಾರಿಗೆ ಆರೋಗ್ಯ ಮೇಳ ನಡೆಸಿದೆ. ಜನತೆ ಈ ಮೇಳದ ಪ್ರಯೋಜನ ಪಡೆದು ಆರೋಗ್ಯ ಕಾಪಾಡಿಕೊಳ್ಳುವಂತೆ ಸಲಹೆ ನೀಡಿದರು. ವೈದ್ಯರು ಜನಸಾಮಾನ್ಯರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಅಗತ್ಯ ಚಿಕಿತ್ಸೆ ನೀಡಿ ಅವರಿಗೆ ಯಾವುದೇ ಕುಂದು ಕೊರತೆ ಆಗದಂತೆ ಸೇವೆ ಸಲ್ಲಿಸುವಂತೆ ಸೂಚಿಸಿದರು.
ಜನರ ಆರೋಗ್ಯ ತಪಾಸಣೆಯ ವ್ಯವಸ್ಥೆಗಳ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಆರೋಗ್ಯ ತಪಾಸಣೆ ಸಂದರ್ಭದಲ್ಲಿ ಜನರಿಗೆ ಉನ್ನತ ಮಟ್ಟದ ಚಿಕಿತ್ಸೆಯನ್ನು ನೀಡುವಂತೆ ಮಾರ್ಗದರ್ಶನ ನೀಡಿದರು.
ಶಾಸಕ ಡಾ.ಕೆ.ಅನ್ನದಾನಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಟಿ. ಎನ್.ಧನಂಜಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಸಂಜಯ್ ಸೇರಿದಂತೆ ಇತರರು ಉಪ್ಥತರಿದ್ದರು.