Saturday, November 21, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಪತ್ರಕರ್ತರ ಆರೋಗ್ಯ ನಿಧಿ ಅನುದಾನ ಹೆಚ್ಚಿಸಲು ಮನವಿ

ಪತ್ರಕರ್ತರಿಗಾಗಿ ಮಂಡ್ಯ ನಗರಸಭೆ ಅನುಷ್ಠಾನಗೊಳಿಸಿರುವ ಆರೋಗ್ಯ ನಿಧಿ ಯೋಜನೆಯ ಅನುದಾನವನ್ನು 3 ಲಕ್ಷದಿಂದ 5 ಲಕ್ಷ ರೂ. ಗಳಿಗೆ ಹೆಚ್ಚಿಸುವಂತೆ ನಗರಸಭೆ ಅಧ್ಯಕ್ಷರಾದ ಎಂ.ವಿ.ಪ್ರಕಾಶ್ ಹಾಗೂ ಆಯುಕ್ತರಾದ ಯು.ಪಿ.ಪಂಪಶ್ರೀ ಅವರಿಗೆ ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮನವಿ ಸಲ್ಲಿಸಲಾಯಿತು.

ಮಂಡ್ಯ ನಗರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತರು ಅನಾರೋಗ್ಯಕ್ಕೆ ಒಳಗಾದ ಸಂದರ್ಭದಲ್ಲಿ ಪರಿಹಾರ ನೀಡುವ ಉದ್ದೇಶದಿಂದ ನಗರಸಭೆ ಪತ್ರಕರ್ತರ ಆರೋಗ್ಯ ನಿಧಿ ಯೋಜನೆ ಅನುಷ್ಠಾನಗೊಳಿಸಿದೆ.
ಯೋಜನೆಗಾಗಿ ಕಳೆದ ಸಾಲಿನ ಆಯವ್ಯಯದಲ್ಲಿ 3 ಲಕ್ಷ ರೂ. ಹಣ ಮೀಸಲಿಡಲಾಗಿತ್ತು. ಮುಂಬರುವ 2025-26ನೇ ಸಾಲಿನ ಆಯವ್ಯಯದಲ್ಲಿ 5 ಲಕ್ಷ ರೂ. ಮೀಸಲಿಡಬೇಕು ಹಾಗೂ ಪರಿಹಾರ ವಿತರಣೆಗೆ ಇರುವ ನಿಬಂಧನೆಗಳನ್ನ ಸರಳಗೊಳಿಸಲು ಮನವಿ ಮಾಡಿಕೊಳ್ಳಲಾಯಿತು. ಮನವಿ ಸ್ವೀಕರಿಸಿದ ಅಧ್ಯಕ್ಷ ಎಂ.ವಿ.ಪ್ರಕಾಶ್, ಪತ್ರಕರ್ತರ ಸಂಘದ ಮನವಿಗೆ ಸ್ಪಂಧಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಅರುಣ್ ಕುಮಾರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎನ್.ನವೀನ್ ಕುಮಾರ್, ರಾಜ್ಯ ಕಾರ್ಯದರ್ಶಿ ಕೆರಗೋಡು ಸೋಮಶೇಖರ್, ಮಾಜಿ ಅಧ್ಯಕ್ಷರಾದ ಕೆ.ಸಿ.ಮಂಜುನಾಥ್, ಬಿ.ಪಿ.ಪ್ರಕಾಶ್, ಪ್ರಧಾನಕಾರ್ಯದರ್ಶಿ ಆನಂದ್, ಖಜಾಂಚಿ ನಂಜುಂಡಸ್ವಾಮಿ, ಬಾಲಕೃಷ್ಣ ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ