Wednesday, October 23, 2024

ಪ್ರಾಯೋಗಿಕ ಆವೃತ್ತಿ

ಆರೋಗ್ಯವಂತ ಜೀವನ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆ ಸಂಜೀವಿನಿ

ಆರೋಗ್ಯವಂತ ಜೀವನ ಹಾಗೂ ವ್ಯಕ್ತಿತ್ವದ ವಿಕಸನಕ್ಕೆ ಕ್ರೀಡೆಯು ಸಂಜೀವಿನಿಯಾಗಿದೆ ಎಂದು ರೇಷ್ಮೆ ಹಾಗೂ ಕ್ರೀಡಾ ಸಚಿವ ಡಾ.ನಾರಾಯಣಗೌಡ ಹೇಳಿದರು.

ಕೆ.ಆರ್.ಪೇಟೆ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ನಡೆದ ತಾಲ್ಲೂಕು ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಯುವಜನರು ಹಾಗೂ ವಿದ್ಯಾರ್ಥಿಗಳು ಉತ್ತಮವಾದ ಕ್ರೀಡಾಪಟುಗಳಾಗುವ ಮೂಲಕ ಸರ್ವಶ್ರೇಷ್ಠ ಸಾಧನೆ ಮಾಡಿ ದೇಶದ ಕೀರ್ತಿಯನ್ನು ಬೆಳಗಬೇಕು ಎಂದರು.

ಕ್ರೀಡೆಯಲ್ಲಿ ಸೋಲು ಗೆಲುವು ಎಂಬುದು ಸರ್ವೇ ಸಾಮಾನ್ಯ. ಯುವಜನರು ಕ್ರೀಡಾಸ್ಪೂರ್ತಿಯನ್ನು ಮೈಗೂಡಿಸಿಕೊಂಡು ಕ್ರೀಡಾಮನೋಭಾವನೆಯಿಂದ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಸತತವಾದ ಅಭ್ಯಾಸದಿಂದ ಸೋಲನ್ನೇ ಗೆಲುವನ್ನಾಗಿಸಿಕೊಂಡು ಕ್ರೀಡಾ ಸಾಧಕರಾಗಿ ಹೊರಹೊಮ್ಮಬೇಕು ಎಂದು ಕರೆ ನೀಡಿದರು.

ಕೆ.ಆರ್.ಪೇಟೆಯಲ್ಲಿ 15 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣವಾಗುತ್ತಿದ್ದು ಕಾಮಗಾರಿಯು ಅಂತಿಮ ಹಂತಕ್ಕೆ ಬಂದಿದೆ. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅತ್ಯುತ್ತಮವಾದ ಕ್ರೀಡಾಂಗಣವನ್ನು ನಿರ್ಮಿಸಿಕೊಡುವ ಮೂಲಕ ಕ್ರೀಡಾ ಚಟುವಟಿಕೆಗಳಿಗೆ ಸಹಕಾರ ನೀಡಲು ತಾವು ಬದ್ಧವಾಗಿರುವುದಾಗಿ ತಿಳಿಸಿದರು.

ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಶ್ರೀನಿವಾಸ್ ಮಾತನಾಡಿ ಯುವಜನರು ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಡರಾಗಿರಲು ಕ್ರೀಡಾ ಚಟುವಟಿಕೆಗಳು ವರದಾನವಾಗಿವೆ. ವಿದ್ಯಾರ್ಜನೆಗೆ ನೀಡುವಷ್ಟೇ ಪ್ರಾಧಾನ್ಯತೆಯನ್ನು ಕ್ರೀಡೆಗೂ ವಿದ್ಯಾರ್ಥಿಗಳು ನೀಡುವ ಮೂಲಕ ಅತ್ಯುತ್ತಮವಾದ ಕ್ರೀಡಾಪಟುಗಳಾಗಿ ರೂಪುಗೊಳ್ಳಬೇಕು ಎಂದು ಕರೆ ನೀಡಿದರು.

ಮನ್ಮುಲ್ ನಿರ್ದೇಶಕ ಡಾಲು ರವಿ, ಜಿ.ಪಂ.ಮಾಜಿ ಸದಸ್ಯ ಶೀಳನೆರೆ ಅಂಬರೀಶ್, ಪುರಸಭೆ ಅಧ್ಯಕ್ಷೆ ಮಹಾದೇವಿ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಾ.ಎಸ್.ಕೃಷ್ಣಮೂರ್ತಿ, ಪುರಸಭೆ ಸದಸ್ಯರಾದ ಶುಭಾಗಿರೀಶ್, ಕೆ.ಆರ್.ನೀಲಕಂಠ, ತಾಲ್ಲೂಕು ಪದವಿಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷ ಡಿ.ಬಿ.ಸತ್ಯ, ಸರ್ಕಲ್ ಇನ್ಸ್ ಪೆಕ್ಟರ್ ಎಂ.ಕೆ.ದೀಪಕ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಡಾ.ಕೆ.ಎಸ್.ರಾಜೇಶ್, ಸಾಹಿತಿ ಬಲ್ಲೇನಹಳ್ಳಿ ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್.ಸೀತಾರಾಮ್ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!