Thursday, September 19, 2024

ಪ್ರಾಯೋಗಿಕ ಆವೃತ್ತಿ

ಆರೋಗ್ಯವಂತ ಸಮಾಜಕ್ಕೆ ಜಾಗೃತಿ ಅಗತ್ಯ : ನಳಿನ ಕುಮಾರಿ

ಏಡ್ಸ್ ರೋಗವನ್ನು ಸಂಪೂರ್ಣವಾಗಿ ಅಂತ್ಯಗೊಳಿಸಿ, ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಎ.ಎಂ.ನಳಿನಿ ಕುಮಾರಿ ಹೇಳಿದರು.

ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಇಂದು ನಡೆದ ವಿಶ್ವ ಏಡ್ಸ್ ದಿನಾಚರಣೆ ಹಾಗೂ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿದ್ದಾರೆ. ಸಂವಿಧಾನದ ಅವಶ್ಯಕತೆ, ಪ್ರಜಾಪ್ರಭುತ್ವ, ಸಂವಿಧಾನದ ಪೀಠಿಕೆ ಕುರಿತಂತೆ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ ಸಲಹೆಗಳನ್ನು ನೀಡಿದರು.

ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಕಾರ್ಯಕ್ರಮಾಧಿಕಾರಿ ಡಾ.ಆಶಾಲತಾ ಮಾತನಾಡಿ, ಏಡ್ಸ್ ಅಂತ್ಯಗೊಳಿಸಲು ಅಸಮಾನತೆಯನ್ನು ಕೊನೆಗಾಣಿಸಲು ಪ್ರತಿಯೊಬ್ಬರ ಆರೋಗ್ಯವನ್ನು ಕಾಪಾಡಲು ಹಾಗೂ ಪ್ರತಿಯೊಬ್ಬರನ್ನು ಖುಷಿಯಾಗಿಡಲು ವಿಶ್ವವು ಒಂದಾಗಬೇಕಿದೆ ಎಂಬ ಘೋಷವಾಕ್ಯದೊಂದಿಗೆ ಈ ಬಾರಿಯ ಏಡ್ಸ್ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾರಾಗೃಹದ ಅಧೀಕ್ಷಕ ಲೋಕೇಶ್, ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣಾಧಿಕಾರಿ ಡಾ.ಧನಂಜಯ್, ಮಿಮ್ಸ್ ಸಮುದಾಯ ವೈದ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ಸುಭಾಷ್ ಬಾಬು, ಮಿಮ್ಸ್ ನಿರ್ದೇಶಕ ಡಾ.ಬಿ.ಜಿ.ಮಹೇಂದ್ರ, ವಕೀಲರ ಸಂಘದ ಅಧ್ಯಕ್ಷ ನಾಗರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಾಗರಾಜು, ಪಿ.ಇ.ಎಸ್. ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಮಹಾಲಿಂಗೇಗೌಡ, ಆರ್.ಸಿ.ಎಚ್.ಅಧಿಕಾರಿ ಡಾ.ಅನಿಲ್ ಕುಮಾರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!