Friday, November 20, 2026

ಪ್ರಾಯೋಗಿಕ ಆವೃತ್ತಿ

ರಾಜ್ಯದಾದ್ಯಂತ ಮತ್ತೇ ಮುಂಗಾರು ಆರ್ಭಟ : 7 ದಿನಗಳ ಕಾಲ ಭಾರೀ ಮಳೆ

ಮುಂದಿನ ಏಳು ದಿನಗಳ ಕಾಲ ರಾಜ್ಯದಾದ್ಯಂತ ತೀವ್ರ ಗಾಳಿಯೊಂದಿಗೆ ಅಲ್ಲಲ್ಲಿ ಸಾಧಾರಣ ಮತ್ತು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್‌ 14ರಿಂದ ಮಳೆ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇಂದಿನಿಂದ ಆಗಸ್ಟ್ 13ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ. ಆದರೆ ಆಗಸ್ಟ್ 14ರಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ.

ಕರ್ನಾಟಕದ ಒಳನಾಡಿನ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಇಂದು(ಆಗಸ್ಟ್ 9) ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ನಾಳೆಯಿಂದ ಗುಡುಗು ಇಲ್ಲದೆ, ಸಾಧಾರಣ ಮಳೆಯಾಗಲಿದೆ.

ಆದರೆ ಆಗಸ್ಟ್ 14ರಿಂದ ಮತ್ತೆ ಮಳೆ ಅಬ್ಬರ ಹೆಚ್ಚಾಗಲಿದೆ. ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಜ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ದಕ್ಷಿಣ ಒಳನಾಡಿನಲ್ಲಿ ನಿರಂತರ ಮಳೆಯಾಗಲಿದೆ. ಆಗಸ್ಟ್ 14ರಂದು ಶಿವಮೊಗ್ಗ ಚಿಕ್ಕಮಗಳೂರು ಒಂದೆರಡು ಸ್ಥಳಗಳಲ್ಲಿ ಭಾ ಮಳೆಯಾಗುವ ಸಾಧ್ಯತೆಯಿದೆ. ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿ ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಹಲವೆಡೆ ಸಾ ಮಳೆಯಾಗುವ ಸಾಧ್ಯೆಯಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ