ಮಂಡ್ಯ ತಾಲ್ಲೂಕಿನ ಬೂದನೂರು ಉತ್ಸವ ಪ್ರಯುಕ್ತ ಮಂಡ್ಯ ಜಿಲ್ಲೆಯ ಚಿಕ್ಕಮಂಡ್ಯದಲ್ಲಿ ನಾಳೆ (ಫೆ. 20) ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್ ರೈಡ್ಸ್) ಆರಂಭವಾಗಲಿದೆ.
ಬೆಳಿಗ್ಗೆ 8.30 ಗಂಟೆಗೆ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೆಲಿಕಾಪ್ಟರ್ ಜಾಯ್ ರೈಡ್ಸ್ ಉದ್ಘಾಟಿಸುವರು. ಈ ಸಂದರ್ಭದಲ್ಲಿ ಮಂಡ್ಯ ಶಾಸಕ ರವಿಕುಮಾರ್ ಸೇರಿದಂತೆ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.
ಸ್ಥಳ ಪರಿಶೀಲನೆ
ಈ ಸಂಬಂಧ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಸ್ಥಳ ಪರಿಶೀಲನೆ ನಡೆಸಿ ಹೆಲಿಪ್ಯಾಡ್ ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕೆಂದು ಸೂಚಿಸಿದರು.
ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು, ಸುರಕ್ಷತೆ, ವಾಹನ ನಿಲುಗಡೆ ಮತ್ತು ತುರ್ತು ಸೇವೆಗಳ ಲಭ್ಯತೆ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿ, ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.




