Thursday, July 25, 2024

ಪ್ರಾಯೋಗಿಕ ಆವೃತ್ತಿ

ಕೆ.ಆರ್.ಪೇಟೆ| ಹೈಟೆಕ್ ಅತಿಥಿ ಗೃಹಗಳ ನಿರ್ಮಾಣಕ್ಕೆ ಶಾಸಕರ ಭೂಮಿಪೂಜೆ

ಕೃಷ್ಣರಾಜಪೇಟೆ ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ಮೂರು ಕೋಟಿ ರೂಪಾಯಿಗಳ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಾಣವಾಗುತ್ತಿರುವ ಅತಿಥಿ ಗೃಹಗಳ ನಿರ್ಮಾಣ ಕಾಮಗಾರಿಗೆ ಶಾಸಕ ಎಚ್.ಟಿ ಮಂಜು ಭೂಮಿ ಪೂಜೆ ಮಾಡಿದರು.

ಕೃಷ್ಣರಾಜಪೇಟೆ ಪಟ್ಟಣವು ಮಂಡ್ಯ ಜಿಲ್ಲೆಯಲ್ಲಿಯೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪಟ್ಟಣವಾಗಿರುವುದ ರಿಂದ ತಾಲೂಕಿನ ಪುರಾಣ ಪ್ರಸಿದ್ಧ ತೀರ್ಥಕ್ಷೇತ್ರಗಳಾಗಿರುವ ಅಂಬಿಗರಹಳ್ಳಿಯ ತ್ರಿವೇಣಿ ಸಂಗಮ ಹಾಗೂ ಭೂವರಹನಾಥ ಕಲ್ಲಹಳ್ಳಿ ಮತ್ತು ಹೊಸಹೊಳಲಿನ ಹೊಯ್ಸಳ ಶಿಲ್ಪಕಲೆಯ ಅಪೂರ್ವ ತಾಣ ಶ್ರೀ ಲಕ್ಷ್ಮೀನಾರಾಯಣ ಸ್ವಾಮಿ ದೇವಾಲಯಕ್ಕೆ ಆಗಮಿಸುವ ಯಾತ್ರಿಕರು ಹಾಗೂ ಗಣ್ಯರಿಗೆ ಅನುಕೂಲವಾಗುವ ದೃಷ್ಟಿಯಿಂದ ಈ ಹಿಂದಿನ ಬಿಜೆಪಿ ಸರ್ಕಾರವು ಮೂರು ಕೋಟಿ ರೂಪಾಯಿ ವಿಶೇಷ ಅನುದಾನವನ್ನು ಬಿಡುಗಡೆ ಮಾಡಿದ್ದು ಕಾಮಗಾರಿ ಆರಂಭವಾಗದೇ ವಿಳಂಬವಾಗಿತ್ತು.

ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ನಿರ್ಮಾಣ ಮಾಡುತ್ತಿರುವ ಹೈಟೆಕ್ ಅತಿಥಿ ಗೃಹಗಳ ಕಾಮಗಾರಿಗೆ ಭೂಮಿ ಪೂಜೆ ಮಾಡಿದ್ದೇನೆ. ಅತಿಥಿಗೃಹಗಳ ನಿರ್ಮಾಣ ಕಾಮಗಾರಿಯಲ್ಲಿ ಗುಣಮಟ್ಟವನ್ನು ಕಾಪಾಡಿಕೊಂಡು ಆದಷ್ಟು ಶೀಘ್ರವಾಗಿ ಕಾಮಗಾರಿಯನ್ನು ಮುಗಿಸಿ ಸೇವೆಗೆ ಅತಿಥಿಗೃಹಗಳು ಲೋಕಾರ್ಪಣೆಯಾಗಬೇಕು ಈ ದಿಕ್ಕಿನಲ್ಲಿ ಗುತ್ತಿಗೆದಾರರು ಆದಷ್ಟು ಶೀಘ್ರವಾಗಿ ಕಾಮಗಾರಿಯನ್ನು ಮುಗಿಸಿ ಕೊಡಬೇಕು ಎಂದು ಶಾಸಕ ಮಂಜು ನಿರ್ದೇಶನ ನೀಡಿದರು.

ಪುರಸಭೆ ಮಾಜಿ ಅಧ್ಯಕ್ಷ ನಟರಾಜು, ಪುರಸಭೆ ಮಾಜಿ ಸದಸ್ಯ ಕೆ.ಆರ್.ಹೇಮಂತ ಕುಮಾರ್, ಎಪಿಎಂಸಿ ಮಾಜಿ ಅಧ್ಯಕ್ಷ ನಾಗರಾಜೇಗೌಡ, ಮುಖಂಡರಾದ ರವಿಕುಮಾರ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯ ಪಾಲಕ ಅಭಯಂತರ ಮಂಜುನಾಥ್, ಪ್ರಥಮ ದರ್ಜೆ ಗುತ್ತಿಗೆದಾರರಾದ ಮೈಸೂರಿನ ನಟರಾಜು, ಕೃಷ್ಣರಾಜಪೇಟೆ ತಾಲೂಕು ವಕೀಲರ ಸಂಘದ ಅಧ್ಯಕ್ಷ ಎನ್ ಆರ್ ರವಿಶಂಕರ್, ಪ್ರಧಾನ ಕಾರ್ಯದರ್ಶಿ ಆರ್.ಕೆ. ರಾಜೇಗೌಡ, ಶಾಸಕರ ಆಪ್ತ ಸಹಾಯಕ ಅರಳಕುಪ್ಪೆ ಪ್ರತಾಪ್, ತೋಟಗಾರಿಕೆ ಅಧಿಕಾರಿ ಡಾ.ಜಯರಾಮು ಮತ್ತಿತರರು ಭೂಮಿ ಪೂಜ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!